Vijayapura District Court Recruitment 2021 : 5 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಚೇರಿ, ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಗ್ರೇಡ್ III - 5 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 30,2021 ರಿಂದ ನವೆಂಬರ್ 30,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಜಯಪುರ ನೇಮಕಾತಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಶೀಘ್ರಲಿಪಿಗಾರ ಹುದ್ದೆಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ:

ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಜಯಪುರ ನೇಮಕಾತಿಯ ಶೀಘ್ರಲಿಪಿಗಾರ ಗ್ರೇಡ್ III ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.27,650/- ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ವಯೋಮಿತಿ:

ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆಯ ವಿಧಾನ:

ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು. ಈ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಕಂಪ್ಯೂಟರ್ ನಲ್ಲಿ ಬೆರಳಚ್ಚು ಮಾಡುವ ಜ್ಞಾನವನ್ನು ಹೊಂದಿರಬೇಕಾಗಿರುತ್ತದೆ.

ನಿಗದಿತ ಅರ್ಜಿ ಶುಲ್ಕ:

ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು ೧೦೦/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ:

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/vijayapura-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan download ಸೌಲಭ್ಯದ ಮೂಲಕ ನವೆಂಬರ್ 30,2021ರೊಳಗೆ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan downloadಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಡಿಸೆಂಬರ್ 3,2021ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಈ ಮೇಲಿನ ವಿಧಾನಗಳನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/vijayapura-onlinerecruitment ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 30,2021ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Vijayapura district court recruitment 2021 notification has been released for 5 stenographer posts. Interested candidates can apply through online before November 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+