
ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅನ್‌ಲೈನ್ ಮೂಲಕ ಏಪ್ರಿಲ್ 23,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಏಪ್ರಿಲ್ 1,2021ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ:
ಅರ್ಜಿದಾರರು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಏಪ್ರಿಲ್ 25,2021ರಂದು ನಡೆಯುವ ಆನ್‌ಲೈನ್ ಪರೀಕ್ಷೆ ಮತ್ತು ಮೇ 1,2021ರಂದು ನಡೆಯುವ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ವಿಕಾಸ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್
https://www.vikasbank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 23,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











