ವಿಕ್ರಮ್ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಟೆಕ್ನಿಕಲ್ ಅಸಿಸ್ಟೆಂಟ್, ಸೈಂಟಿಫಿಕ್ ಅಸಿಸ್ಟೆಂಟ್ , ಜೂನಿಯರ್ ಹಿಂದಿ ಟ್ರಾನ್ಸ್ಲೇಟರ್, ರೇಡಿಯೋಗ್ರಾಫರ್ ಮತ್ತು ಟೆಕ್ನಿಷಿಯನ್ ಬಿ ಸೇರಿದಂತೆ 87 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ
ಟೆಕ್ನಿಕಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿಚ್ಛಿಸುವವರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂಮದ ಡಿಪ್ಲೊಮಾ ಪದವಿ ಹೊಂದಿರಬೇಕು.
ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವವಿದ್ಯಾಲಯದಿಂದ ಕೆಮಿಸ್ಟ್ರಿ ವಿಷಯದಲ್ಲಿ ಪದವಿ ಗಳಿಸಿರಬೇಕು.
ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆ
- ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
- ಅಭ್ಯರ್ಥಿಗಳು ವಿಕ್ರಮ್ ಸಾರಾಭಾಯಿ ಬಾಹ್ಯಾಕಾಶ ಸಂಶೋಧನಾ ಕೇಂದ್ರದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸತಕ್ಕದ್ದು.
ಅರ್ಜಿ ಶುಲ್ಕ
- ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.250/-
- ಟಿಕ್ನಿಷಿಯನ್ ಬಿ ಮತ್ತು ರೇಡಿಯೋಗ್ರಾಫರ್ ಹುದ್ದೆಗಳಿಗೆ ರೂ.100/-
- ಎಸ್.ಸಿ/ಎಸ್.ಟಿ/ಮಹಿಳೆ/ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/10/2017
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts
English summary
Vikram Sarabhai Space Centre (VSSC) has invited the applications for the positions of Technical Assistant, Scientific Assistant, Junior Hindi Translator, Scientist/Engineer, Radiographer and Technician-B Posts.
Story first published: Friday, October 13, 2017, 11:45 [IST]


Click it and Unblock the Notifications











