VIMS Bellary Recruitment 2020: 65 ಶುಶ್ರೂಷಾಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿ ಇಲ್ಲಿ 65 ಶುಶ್ರೂಷಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ನೇಮಕಾತಿ ಬಗೆಗೆ ಸಂಪೂರ್ಣವಾಗಿ ಓದಿಕೊಂಡು ನಂತರ ಸೆ.2ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸೆ.2ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಜಿ.ಎನ್.ಎಂ. ಶುಶ್ರೂಷತರ ತರಬೇತಿ ಹೊಂದಿರತಕ್ಕದ್ದು ಮತ್ತು ಬಿ.ಎಸ್ಸಿ. ನರ್ಸಿಂಗ್ ಹೊಂದಿದ್ದಲ್ಲಿ ಆದ್ಯತೆ ನೀಡಲಾಗುವುದು.

ವಯೋಮಿತಿ:

ಪ.ಜಾ, ಪ.ಪಂ ಅಥವಾ ಪ್ರವರ್ಗ-1ರ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು, ಪ್ರವರ್ಗ-2ಎ, 2ಬಿ, 3ಎ ಅಥವಾ 3ಬಿಯ ಗರಿಷ್ಟ 38 ವರ್ಷ ಮತ್ತು ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ಶುಶ್ರೂಷಾಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಅಭ್ಯರ್ಥಿಗಳು ವಿಮ್ಸ್ ವೆಬ್‌ಸೈಟ್ https://www.vimsbellary.org.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೊತೆಗೆ 500/-ರೂ ಅರ್ಜಿ ಶುಲ್ಕವನ್ನು ನಿರ್ದೇಶಕರು, ವಿಮ್ಸ್, ಬಳ್ಳಾರಿ ಇವರ ಹೆಸರಿನಲ್ಲಿ ಡಿ.ಡಿ ಮೂಲಕ ಪಡೆದು ಸೆಪ್ಟೆಂಬರ್ 2,2020ರಂದು ಬೆಳಿಗ್ಗೆ 11 ಗಂಟೆಗೆ ವಿಮ್ಸ್ ಆಡಳಿತ ಕಛೇರಿ, ಬಳ್ಳಾರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಂಡು ಸಲ್ಲಿಸತಕ್ಕದ್ದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Vijayanagar Institute of medical sciences bellary (VIMS) recruitment 2020 notification has been released in official website for 65 nursing officer posts. Interested candidates can attend walk in interview on september 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+