VIMS Bellary Recruitment 2022 : 130 ಶುಶ್ರೂಷಾಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿಯಲ್ಲಿ ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಸಂಸ್ಥೆಯಲ್ಲಿ 130 ಶುಶ್ರೂಷಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜುಲೈ 25,2022ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿಮ್ಸ್ ಬಳ್ಳಾರಿಯಲ್ಲಿ 130 ಶುಶ್ರೂಷಾಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

VIMS Bellary ನೇಮಕಾತಿ 2022 ವಿದ್ಯಾರ್ಹತೆ :

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿ ನೇಮಕಾತಿಯ ಶುಶ್ರೂಷಾಧಿಕಾರಿ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಜೆ.ಎನ್‌.ಎಂ ಶುಶ್ರೂಷ ತರಬೇತಿ, ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.

VIMS Bellary ನೇಮಕಾತಿ 2022 ವಯೋಮಿತಿ :

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿ ನೇಮಕಾತಿಯ ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಗರಿಷ್ಟ 35 ವರ್ಷದ ಸಾಮಾನ್ಯ ಅಭ್ಯರ್ಥಿಗಳು, ಇತರೆ ಹಿಂದುಳಿದ ವರ್ಗಗಳ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಪಂಗಡ/ಪರಿಶಿಷ್ಟ ಜಾತಿ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯಯನ್ನು ನೀಡಲಾಗಿರುತ್ತದೆ.

VIMS Bellary ನೇಮಕಾತಿ 2022 ವೇತನ :

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿ ನೇಮಕಾತಿಯ ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ವಿಮ್ಸ್ ಬಳ್ಳಾರಿಯಲ್ಲಿ 130 ಶುಶ್ರೂಷಾಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

VIMS Bellary ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿ ನೇಮಕಾತಿಯ ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

VIMS Bellary ನೇಮಕಾತಿ 2022 ಅರ್ಜಿ ಶುಲ್ಕ :

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿ ನೇಮಕಾತಿಯ ಶುಶ್ರೂಷಾಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

VIMS Bellary ನೇಮಕಾತಿ 2022 ಸಂದರ್ಶನ :

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿ ನೇಮಕಾತಿಯ ಶುಶ್ರೂಷಾಧಿಕಾರಿ ಹುದ್ದೆಗಳ ನೇಮಕಾತಿಗೆ ಜುಲೈ ೨೫,2022ರಂದು ಬೆಳಿಗ್ಗೆ 10:00ಕ್ಕೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
VIMS bellary recruitment 2022 notification has been released for 130 nursing officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X