ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ (ವಿಐಟಿಎಂ ಬೆಂಗಳೂರು)2 ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ವಾಕ್-ಇನ್ ಇಂಟರ್ವ್ಯೂ ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಕ್ಟೋಬರ್ 14,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.
CRITERIA | DETAILS |
Name Of The Posts | ಟ್ರೈನಿ |
Organisation | ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ (ವಿಐಟಿಎಂ ಬೆಂಗಳೂರು) |
Educational Qualification | ಪದವಿ,ಕಂಪ್ಯೂಟರ್ ಸೈನ್ಸ್‌ನಲ್ಲಿ ಡಿಪ್ಲೋಮಾ |
Job Location | ಬೆಂಗಳೂರು (ಕರ್ನಾಟಕ) |
Salary Scale | ತಿಂಗಳಿಗೆ 14,000/-ರೂ |
Application Start Date | October 10, 2019 |
Application End Date | October 14, 2019 |
ವಿದ್ಯಾರ್ಹತೆ:
ವಿಜ್ಞಾನ ವಿಷಯದಲ್ಲಿ ಪದವಿ ಮತ್ತು ಕಂಪ್ಯೂಟರ್ ಸೈನ್ಸ್‌ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವೇತನದ ವಿವರ:
ಟ್ರೈನಿ ಆಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಸಂದರ್ಶನದ ವಿವರ:
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ಅಕ್ಟೋಬರ್ 14,2019ರ ಬೆಳಿಗ್ಗೆ 9:30ಕ್ಕೆ
ಸಂದರ್ಶನ ನಡೆಯುವ ಸ್ಥಳ:
ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ.
ಚಿನ್ನಸ್ವಾಮಿ ಸ್ಟೇಡಿಯಂ ಹತ್ತಿರ,
ಕಸ್ತೂರಬಾ ರಸ್ತೆ,
ಅಂಬೇಡ್ಕರ್ ವೀದಿ,
ಬೆಂಗಳೂರು.
ಅಧಿಕೃತ ವೆಬ್‌ಸೈಟ್: https://www.vismuseum.gov.in/
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.