ವಿಜಾಗ್ ಸ್ಟೀಲ್ ಪ್ಲಾಂಟ್ 11 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್ 29,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ವಿವರವನ್ನು ತಿಳಿಯಲು ಮುಂದೆ ಓದಿ.
ವಿದ್ಯಾರ್ಹತೆ:
ಪದವಿ, ಎಂಬಿಎ, ಪಿಜಿ ಪದವಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,600/- ರಿಂದ 46,500/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ ಮತ್ತು ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ..
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.vizagsteel.com/index.asp ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 29,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.