ವಿಜಾಗ್ ಸ್ಟೀಲ್ ಲಿಮಿಟೆಡ್ ನಲ್ಲಿ 319 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 17ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಅಕ್ಟೋಬರ್ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಓಬಿಸಿ ಅಭ್ಯರ್ಥಿಗಳಿಗೆ ೩ ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ೫ ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಸ್ಟೈಫೆಂಡ್ ವಿವರ:
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,700/- ರಿಂದ 8,050/-ರೂಗಳ ಸ್ಟೈಫೆಂಡ್ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 200/-ರೂ ಮತ್ತು ಪ.ಜಾ/ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.vizagsteel.com/index.asp ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 17,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.