ವಿಜಾಗ್ ಸ್ಟೀಲ್ ಲಿಮಿಟೆಡ್ ನಲ್ಲಿ 319 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 2,2022 ರಿಂದ ಆಗಸ್ಟ್ 18,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Vizag steel ನೇಮಕಾತಿ 2022 ವಿದ್ಯಾರ್ಹತೆ :
ವಿಜಾಗ್ ಸ್ಟೀಲ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Vizag steel ನೇಮಕಾತಿ 2022 ವಯೋಮಿತಿ :
ವಿಜಾಗ್ ಸ್ಟೀಲ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಏಪ್ರಿಲ್ 1,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Vizag steel ನೇಮಕಾತಿ 2022 ವೇತನ :
ವಿಜಾಗ್ ಸ್ಟೀಲ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,700/- ರಿಂದ 8,050/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

Vizag steel ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ವಿಜಾಗ್ ಸ್ಟೀಲ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿಯನ್ನು ಮಾಡಲಾಗುವುದು ತದನಂತರ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Vizag steel ನೇಮಕಾತಿ 2022 ಅರ್ಜಿ ಶುಲ್ಕ :
ವಿಜಾಗ್ ಸ್ಟೀಲ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Vizag steel ನೇಮಕಾತಿ 2022 ಅರ್ಜಿ ಸಲ್ಲಿಕೆ :
ವಿಜಾಗ್ ಸ್ಟೀಲ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://vizagsteel.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಆಗಸ್ಟ್ 2,2022 ರಿಂದ ಆಗಸ್ಟ್ 18,2022ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











