VKSUB recruitment 2020: 105 ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ 2020-21ನೇ ಶೈಕ್ಷಣಿಕ ಸಾಲಿಗೆ 105 ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಮುಂದೆ ಓದಿ.

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ 105 ಹುದ್ದೆಗಳಿವೆ..ಆ.21ರೊಳಗೆ ಅರ್ಜಿ ಹಾಕಿ

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿಯ ಮುಖ್ಯ ಆವರಣ ಹಾಗೂ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಸ್ನಾತಕೋತ್ತರ ಕೇಂದ್ರಗಳಾದ ನಂದಿಹಳ್ಳೀ, ಕೊಪ್ಪಳ ಹಾಗೂ ಯಲಬುರ್ಗಾದಲ್ಲಿರುವ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಅಗತ್ಯತೆಗನುಸಾರವಾಗಿ ಬೋಧನಾಕಾರ್ಯದ ನಿರ್ವಹಣೆಗಾಗಿ ಯುಜಿಸಿ ನಿಯಮಾನುಸಾರ ಪೂರ್ಣಕಾಲಿಕ /ಅರೆಕಾಲಿಕ ಅತಿಥಿ ಉಪನ್ಯಾಸಕರು, ಗ್ರಂಥಾಲಯ ವಿಭಾಗಗಳಲ್ಲಿ ಸಹಾಯಕ ಗ್ರಂಥಪಾಲಕರು, ಗ್ರಂಥಾಲಯ ಸಹಾಯಕರು ಹಾಗೂ ಕ್ರೀಡಾ, ದೈಹಿಕ ಮತ್ತು ಸಾಂಸ್ಕೃತಿಕ ಶಿಕ್ಷಣ ವಿಭಾಗದಲ್ಲಿ ಸಹಾಯಕ ಕ್ರೀಡಾ ನಿರ್ದೇಶಕರ ಹುದ್ದೆಗಳಿಗಾಗಿ ವಿಷಯಗಳ ಬೋಧನಾಕಾರ್ಯಕ್ಕನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆಗಸ್ಟ್ 21.2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ವಿದ್ಯಾರ್ಹತೆ ಮತ್ತು ವಯೋಮಿತಿ:

ಅಥಿತಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳ ಸಂದರ್ಶನದ ದಿನಾಂಕ ಮತ್ತು ಸಮಯವನ್ನು ಹಾಗೂ ಇದಕ್ಕೆ ಸಂಬಂಧಿಸಿದ ಇನ್ನಿತರ ಮಾಹಿತಿಯನ್ನು ವಿಶ್ವವಿದ್ಯಾಲಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳಿಗೆ 500/-ರೂ ಹಾಗೂ ಪ.ಜಾ/ಪ.ಪಂ, ಪ್ರವರ್ಗ-1 ಅಭ್ಯರ್ಥಿಗಳಿಗೆ 250/-ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ http://vskub.ac.in/ ಗೆ ಭೇಟಿ ನೀಡಿ. ಅಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಗದಿತ ಶುಲ್ಕದ ಮೂಲಪ್ರತಿ ಡಿಡಿಯನ್ನು ಹಣಕಾಸು ಅಧಿಕಾರಿಗಳು, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ ಇವರ ಹೆಸರಿನಲ್ಲಿ ಪಡೆದು ಲಗತ್ತಿಸಬೇಕು ಅಥವಾ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕೆನರಾಬ್ಯಾಂಕ್ ಖಾತೆಸಂಖ್ಯೆ: 3866101000001ಗೆ (IFSC: CNRBOO03866) ಹಣ ಪಾವತಿಸಿದ ಚಲನ್ ನ ಅಭ್ಯರ್ಥಿಯ ಪ್ರತಿಯನ್ನು ಲಗತ್ತಿಸತಕ್ಕದ್ದು.

ಅಭ್ಯರ್ಥಿಗಳು ಅರ್ಜಿಗಳನ್ನು ಆಗಸ್ಟ್ 21,2020ರೊಳಗೆ ವಿಶ್ವವಿದ್ಯಾಲಯದ ಮುಖ್ಯ ಆವರಣ, ಬಳ್ಳಾರಿಯಲ್ಲಿ ವಿಭಾಗದ ಮುಖ್ಯಸ್ಥರ ಕಛೇರಿಗೆ ಖುದ್ದಾಗಿ/ರಿಜಿಸ್ಟರ್ ಅಂಚೆ ಮುಖಾಂತರ ಸಲ್ಲಿಸತಕ್ಕದ್ದು. ಅಪೂರ್ಣವಾದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
VKSUB recruitment 2020 notification has been released for the recruitment of 105 guest faculty posts. Interested candidates can apply before August 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X