ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ 108 ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಅಕ್ಟೋಬರ್ 16,2021ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿಯ ಮುಖ್ಯ ಆವರಣ ಹಾಗೂ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಸ್ನಾತಕೋತ್ತರ ಕೇಂದ್ರಗಳಾದ ನಂದಿಹಳ್ಳಿ, ಕೊಪ್ಪಳ ಹಾಗೂ ಯಲಬುರ್ಗಾದಲ್ಲಿರುವ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಅಗತ್ಯತೆಗನುಸಾರವಾಗಿ ಬೋಧನಾಕಾರ್ಯದ ನಿರ್ವಹಣೆಗಾಗಿ ಯುಜಿಸಿ ನಿಯಮಾನುಸಾರ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರು, ಗ್ರಂಥಾಲಯ ವಿಭಾಗಗಳಲ್ಲಿ ಸಹಾಯಕ ಗ್ರಂಥಪಾಲಕರು ಹಾಗೂ ಕ್ರೀಡಾ, ದೈಹಿಕ ಮತ್ತು ಸಾಂಸ್ಕೃತಿಕ ಶಿಕ್ಷಣ ವಿಭಾಗದಲ್ಲಿ ಸಹಾಯಕ ಕ್ರೀಡಾ ನಿರ್ದೇಶಕರ ಹುದ್ದೆಗಳಿಗಾಗಿ ವಿಷಯಗಳ ಬೋಧನಾಕಾರ್ಯಕ್ಕನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ ಮತ್ತು ವಯೋಮಿತಿ :
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ:
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ :
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಭರ್ತಿ ಮಾಡಿದ ಅರ್ಜಿಯೊಂದಿಗೆ ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ-01ರ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಅಭ್ಯರ್ಥಿಗಳು ನಿಗದಿತ ಶುಲ್ಕದ ಮೂಲಪ್ರತಿ ಡಿಡಿಯನ್ನು ಹಣಕಾಸು ಅಧಿಕಾರಿಗಳು, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಲಯ, ಬಳ್ಳಾರಿ ಇವರ ಹೆಸರಿನಲ್ಲಿ ಪಡೆದು ಲಗತ್ತಿಸಬೇಕು ಅಥವಾ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕೆನರಾಬ್ಯಾಂಕ್ ಖಾತೆಸಂಖ್ಯೆ 3866101000001 (ಐಎಫ್‌ಎಸ್‌ಸಿ : ಸಿಎನ್‌ಆರ್‌ಬಿ 0003866) ಹಣ ಪಾವತಿಸಿದ ಚಲನ್ ನ ಅಭ್ಯರ್ಥಿಯ ಪ್ರತಿಯನ್ನು ಲಗತ್ತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ :
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://vskub.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 16,2021ರೊಳಗಾಗಿ ವಿಶ್ವವಿದ್ಯಾಲಯದ ಮುಖ್ಯ ಆವರಣ, ಬಳ್ಳಾರಿಯಲ್ಲಿ ವಿಭಾಗದ ಮುಖ್ಯಸ್ಥರ ಕಚೇರಿಗೆ ಖುದ್ದಾಗಿ/ರಿಜಿಸ್ಟರ್ಡ್ ಅಂಚೆ ಮುಖಾಂತರ ಸಲ್ಲಿಸಬಹುದು. ಅಪೂರ್ಣವಾದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅಭ್ಯರ್ಥಿಗಳು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ನೇಮಕಾತಿಯ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











