ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ 194 ಗ್ರಾಜುಯೇಟ್ ಅಪ್ರೆಂಟಿಸ್
ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ನವೆಂಬರ್ 12,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

VSSC ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಪದವಿ, ಬಿ.ಇ/ಬಿ.ಟೆಕ್ ಮತ್ತು ಬಿ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
VSSC ನೇಮಕಾತಿ 2022 ವಯೋಮಿತಿ :
ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅಕ್ಟೋಬರ್ 30,2022ರ ಅನ್ವಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
VSSC ನೇಮಕಾತಿ 2022 ವೇತನದ ವಿವರ :
ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.
VSSC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
VSSC ನೇಮಕಾತಿ 2022 ಅರ್ಜಿ ಶುಲ್ಕ :
ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
VSSC ನೇಮಕಾತಿ 2022 ಅರ್ಜಿ ಸಲ್ಲಿಕೆ :
ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.vssc.gov.in/
ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 12,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ :
St. Mary's Higher Secondary School, Pattom, Thiruvananthapuram, Kerala
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications