VTU Recruitment 2021 : 21 ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಗಣಕಯಂತ್ರ ವಿಜ್ಞಾನ ಮತ್ತು ಅಭಿಯಾಂತ್ರಿಕ ವಿಭಾಗದ ಬೆಳಗಾವಿ, ಕಲಬುರ್ಗಿ, ಮೈಸೂರು ಮತ್ತು ಮುದ್ದೇನಹಳ್ಳಿ ಕೇಂದ್ರಗಳಲ್ಲಿ 2021-22ನೇ ಶೈಕ್ಷಣಿಕ ಸಾಲಿನಲ್ಲಿ 21 ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿಟಿಯು ದಲ್ಲಿ 21 ಅತಿಥಿ ಉಪನ್ಯಾಸಕ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಎಂಸಿಎ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.

ವೇತನ:

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರ ವರ್ಗ 2ಎ, 2ಬಿ, 3ಬಿ ಗೆ ಸೇರಿದ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು RTGS/NEFT ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ನವೆಂಬರ್ 10,2021 ರಿಂದ ನವೆಂಬರ್ 16,2021ರ ಸಂಜೆ 5:00 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅರ್ಜಿಯನ್ನು ಇ-ಮೇಲ್ ಮೂಲಕ ಸಲ್ಲಿಸಿದ ನಂತರ ಪ್ರಮಾಣ ಪತ್ರಗಳು ಮತ್ತು ಮೀಸಲಾತಿಗೆ ಸಂಬಂಧಪಟ್ಟ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ ನವೆಂಬರ್ 16,2021ರ ಸಂಜೆ 5:00 ಗಂಟೆಯೊಳಗೆ ಗಣಕಯಂತ್ರ ವಿಜ್ಞಾನ ಮತ್ತು ಅಭಿಯಾಂತ್ರಿಕ ವಿಭಾಗದ ವಿ.ತಾ.ವಿ. ಬೆಳಗಾವಿ ವಿಳಾಸಕ್ಕೆ ಅಂಚೆಯ ಮೂಲಕ ಅಥವಾ ಖುದ್ದಾಗಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವಿಟಿಯು ಅಧಿಕೃತ ವೆಬ್‌ಸೈಟ್ https://vtu.ac.in/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
VTU recruitment 2021 notification has been released for 21 guest faculty posts. Interested candidates can apply before November 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+