ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ 11 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್ ಅಥವಾ ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಜನವರಿ 2,2021ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 30 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,60,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ http://www.wapcos.gov.in/default.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 5,2021ರೊಳಗೆ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Sh. G, Venkata Ramana,
Regional Manager,
4th floor,
Issac tower,
near bread world,
jawahar nagar,
kadavanthara,
kochi, kerala-682020.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.