ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ 3 ವೆಬ್ ಡೆವಲಪರ್/ಮೊಬೈಲ್ ಡೆವಲಪರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಫೆಬ್ರವರಿ 6,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಿದ್ಯಾರ್ಹತೆ:
ಎಂಸಿಎ/ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
ಜನವರಿ 1,2021ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗಿಯಾಗಲು ಅರ್ಹರು.
ವೇತನ:
ವೆಬ್ ಡೆವಲಪರ್/ಮೊಬೈಲ್ ಡೆವಲಪರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ http://www.wapcos.gov.in/default.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿಡ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ನಂತರ ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 6,2021ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯು ಸ್ಥಳ:
WAPCOS Limited 76-C,
Institutional Area,
Sector-18,
Gurgaon,
Haryana-122015.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.