ಪಶ್ಚಿಮ ಮಧ್ಯ ರೈಲ್ವೆಯಲ್ಲಿ 1273 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 14,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ಅಪ್ರೆಂಟಿಸ್ |
Organisation | ಪಶ್ಚಿಮ ಮಧ್ಯ ರೈಲ್ವೆ |
Educational Qualification | 10ನೇ ತರಗತಿ/ಎಸ್‌ಎಸ್‌ಎಲ್‌ಸಿ, ಐಟಿಐ |
Application Start Date | January 15, 2020 |
Application End Date | February 14, 2020 |
ವಿದ್ಯಾರ್ಹತೆ:
ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10ನೇ ತರಗತಿ/ಎಸ್‌ಎಸ್‌ಎಲ್‌ಸಿ ಜೊತೆಗೆ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರಬೇಕು.
ವಯೋಮಿತಿ:
ಜನವರಿ 1,2020ರ ಅನ್ವಯ ಕನಿಷ್ಟ 15 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಅರ್ಜಿ ಶುಲ್ಕ:
ಅರ್ಜಿದಾರರು 170/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಥವಾ ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಪಶ್ಚಿಮ ರೈಲ್ವೆಯ ಅಧಿಕೃತ ವೆಬ್‌ಸೈಟ್
https://wcr.indianrailways.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 14,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.