ದಿ ಯರಗಟ್ಟಿ ಅರ್ಬನ್ ಕೋ-ಆಪ್. ಕ್ರೆಡಿಟ್ ಬ್ಯಾಂಕ್ ಲಿ, ಯರಗಟ್ಟಿಯಲ್ಲಿ 6 ಮ್ಯಾನೇಜರ್ ಮತ್ತು ಕಿರಿಯ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ನವೆಂಬರ್ 2,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ನೋಡಿ.

ವಿದ್ಯಾರ್ಹತೆ:
ದಿ ಯರಗಟ್ಟಿ ಅರ್ಬನ್ ಕೋ-ಆಪ್. ಕ್ರೆಡಿಟ್ ಬ್ಯಾಂಕ್ ಲಿಮಿಟೆಡ್ ಯರಗಟ್ಟಿ ನೇಮಕಾತಿಯ ಮ್ಯಾನೇಜರ್ ಹುದ್ದೆಗೆ ಕಾನೂನುಬದ್ಧವಾಗಿ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು.
ಕಿರಿಯ ಸಹಾಯಕರು ಹುದ್ದೆಗಳಿಗೆ ದ್ವಿತೀಯ ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಗಣಕಯಂತ್ರ ಜ್ಞಾನವನ್ನು ಹೊಂದಿರಬೇಕು.
ವಯೋಮಿತಿ:
ದಿ ಯರಗಟ್ಟಿ ಅರ್ಬನ್ ಕೋ-ಆಪ್. ಕ್ರೆಡಿಟ್ ಬ್ಯಾಂಕ್ ಲಿಮಿಟೆಡ್ ಯರಗಟ್ಟಿ ನೇಮಕಾತಿಯ ಮ್ಯಾನೇಜರ್ ಮತ್ತು ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ಮತ್ತು ಹಿಂದುಳಿದ ವರ್ಗದ ಕನಿಷ್ಟ 18 ರಿಂದ ಗರಿಷ್ಟ 38 ವರ್ಷ ಮತ್ತು ಸಾಮಾನ್ಯ ವರ್ಗದ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
ವೇತನ:
ದಿ ಯರಗಟ್ಟಿ ಅರ್ಬನ್ ಕೋ-ಆಪ್. ಕ್ರೆಡಿಟ್ ಬ್ಯಾಂಕ್ ಲಿಮಿಟೆಡ್ ಯರಗಟ್ಟಿ ನೇಮಕಾತಿಯ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,800/- ರಿಂದ 43,200/-ರೂ ಮತ್ತು ಕಿರಿಯ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,500/- ರಿಂದ 24,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ದಿ ಯರಗಟ್ಟಿ ಅರ್ಬನ್ ಕೋ-ಆಪ್. ಕ್ರೆಡಿಟ್ ಬ್ಯಾಂಕ್ ಲಿಮಿಟೆಡ್ ಯರಗಟ್ಟಿ ನೇಮಕಾತಿಯ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 1200/-ರೂ ಮತ್ತು ಕಿರಿಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 1000/-ರೂ ಅರ್ಜಿ ಶುಲ್ಕವನ್ನು ನೇರವಾಗಿ ಪ್ರಧಾನ ಕಛೇರಿ ಯರಗಟ್ಟಿಯಲ್ಲಿ ತುಂಬಬಹುದು ಇಲ್ಲವೇ ಡಿಡಿ/ಪೋಸ್ಟಲ್ ಆರ್ಡರ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಕೆ:
ದಿ ಯರಗಟ್ಟಿ ಅರ್ಬನ್ ಕೋ-ಆಪ್. ಕ್ರೆಡಿಟ್ ಬ್ಯಾಂಕ್ ಲಿಮಿಟೆಡ್ ಯರಗಟ್ಟಿ ನೇಮಕಾತಿಯ ಮ್ಯಾನೇಜರ್ ಮತ್ತು ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿಯನ್ನು ಪ್ರಧಾನ ಕಚೇರಿ ಯರಗಟ್ಟಿಯಲ್ಲಿ ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 2,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











