ಬೆಂಗಳೂರು ರೈಲ್ವೆ ವ್ಹೀಲ್ ಫ್ಯಾಕ್ಟರಿಯಲ್ಲಿ ಅಪ್ರೆಂಟಿಸ್ ತರಬೇತಿ

Posted By:

ಬೆಂಗಳೂರಿನ ರೈಲ್ವೆ ವ್ಹೀಲ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

192 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿದಿತ ದಿನಾಂಕ ನವೆಂಬರ್ 29ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

 ಅಪ್ರೆಂಟಿಸ್ ತರಬೇತಿ

ಹುದ್ದೆಗಳ ವಿವರ

ಫಿಟ್ಟರ್: 85 ಹುದ್ದೆಗಳು
ಮೆಕ್ಯಾನಿಸ್ಟ್: 31 ಹುದ್ದೆಗಳು
ಮೆಕ್ಯಾನಿಕ್ (ಮೋಟಾರ್ ವೆಹಿಕಲ್): 08 ಹುದ್ದೆಗಳು
ಟರ್ನರ್: 05 ಹುದ್ದೆಗಳು
ಸಿ ಎನ್ ಸಿ ಪ್ರೋಗ್ರಾಮಿಂಗ್ ಕಮ್ ಆಪರೇಟರ್ : 23 ಹುದ್ದೆಗಳು
ಎಲೆಕ್ಟ್ರಿಷಿಯನ್: 18 ಹುದ್ದೆಗಳು
ಇಲೆಕ್ಟ್ರಾನಿಕ್ ಮೆಕ್ಯಾನಿಕ್ : 22 ಹುದ್ದೆಗಳು

ವಿದ್ಯಾರ್ಹತೆ

ಎಸ್ಎಸ್ಎಲ್ ಸಿ ಪೂರ್ಣಗೊಳಿಸಿದ ಬಳಿಕ ಸಂಬಂಧಪಟ್ಟ ವಿಷಯದಲ್ಲಿ ಐಟಿಐ ಕೋರ್ಸ್ ಪೂರ್ಣಗೊಳಿಸಿರುವ ಓದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ: ರೂ.6841/- ತಿಂಗಳಿಗೆ.
ವಯೋಮಿತಿ: 29.11.2017ಕ್ಕೆ ಅನ್ವಯವಾಗುವಂತೆ 15 ರಿಂದ 24 ವರ್ಷ.

ಅರ್ಜಿ ಸಲ್ಲಿಕೆ

  • ಅರ್ಜಿಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಮಾತ್ರ ಸಲ್ಲಿಸತಕ್ಕದ್ದು.
  • ಭರ್ತಿ ಮಾಡಿದ ಅರ್ಜಿಗಳನ್ನು ಚೀಫ್ ಪರ್ಸ್ನಲ್ ಆಫೀಸರ್, ರೈಲ್ ವೀಲ್ ಫ್ಯಾಕ್ಟರಿ, ಯೆಲಹಂಕ, ಬೆಂಗಳೂರು-560064 ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ತಲುಪಿಸತಕ್ಕದ್ದು.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100/-
  • ಎಸ್.ಸಿ/ಎಸ್.ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-11-2017
ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ದಿನಾಂಕ: ಡಿಸೆಂಬರ್ ಮೂರನೇ ವಾರ
ತರಬೇತಿ ಪ್ರಾರಂಭವಾಗುವ ದಿನಾಂಕ: ಜನವರಿ 2018

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ವೆಬ್ಸೈಟೇನಲ್ಲಿ ಪ್ರಕಟಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Rail Wheel Factory recruitment 2017 notification has been released on official website for the recruitment of 192 (one hundred and ninety two) vacancies for Trade Apprentices.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia