
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಟಾನದಲ್ಲಿ ದಾವಣಗೆರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ 15 ತಾಂತ್ರಿಕ ಸಹಾಯಕ ಮತ್ತು ತಾಲ್ಲೂಕು ಎಂ.ಐ.ಎಸ್. ಸಂಯೋಜಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಬಿ.ಎಸ್ಸಿ/ಎಂ.ಎಸ್ಸಿ, ಬಿ.ಇ/ಬಿ.ಟೆಕ್ ಮತ್ತು ಬಿಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ಮತ್ತು ತಾಲ್ಲೂಕು ಎಂ.ಐ.ಎಸ್ ಸಂಯೋಜಕರು ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ಮತ್ತು ತಾಲ್ಲೂಕು ಎಂ.ಐ.ಎಸ್ ಸಂಯೋಜಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://davanagere.nic.in/en/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿಯನ್ನು ಪಡೆದುಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 12,2021ರೊಳಗೆ ಜಿಲ್ಲಾ ಪಂಚಾಯಿತಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











