ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ 19 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ 19 ತಜ್ಞ ವೈದ್ಯ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ನವೆಂಬರ್ 11,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ನೀಡಲಾಗುವ ವೇತನ ಮತ್ತು ಇತರೆ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ 19 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ತಜ್ಞ ವೈದ್ಯ ಮತ್ತು ವಿವಿಧ ಹುದ್ದೆಗಳು
Organisation ಜಿಲ್ಲಾ ಪಂಚಾಯಿತಿ
Educational Qualification ಎಂ.ಎಸ್,ಎಂ.ಡಿ,ಪದವಿ,ಸ್ನಾತಕೋತ್ತರ ಪದವಿ,ಎಸ್‌.ಎಸ್‌.ಎಲ್‌.ಸಿ,ಡಿಪ್ಲೋಮಾ ಮತ್ತು 7ನೇ ತರಗತಿ
Job Location ಹಾಸನ (ಕರ್ನಾಟಕ)
Salary Scale ತಜ್ಞ ವೈದ್ಯ-ತಿಂಗಳಿಗೆ 35,000/-ರೂ,ಆಯುಷ್ ಮೆಡಿಸಿನ್ ಡೀಲರ್ಸ್-ತಿಂಗಳಿಗೆ 15,821/-ರೂ, ಅಟೆಂಡೆಂಟ್-ತಿಂಗಳಿಗೆ 11,356/-ರೂ ಮತ್ತು ಮಲ್ಟಿಪರ್ಪಸ್ ವರ್ಕರ್-ತಿಂಗಳಿಗೆ 10,300/-ರೂ
Application Start Date October 14, 2019
Application End Date November 11, 2019

ವಿದ್ಯಾರ್ಹತೆ:

ತಜ್ಞ ವೈದ್ಯ ಹುದ್ದೆಗಳಿಗೆ ಎಂ.ಎಸ್,ಎಂ.ಡಿ,ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ, ಆಯುಷ್ ಮೆಡಿಸಿನ್ ಡೀಲರ್ಸ್ ಹುದ್ದೆಗಳಿಗೆ ಎಸ್‌.ಎಸ್‌.ಎಲ್‌.ಸಿ ಮತ್ತು ಡಿಪ್ಲೋಮಾ, ಮಸಾಜಿಸ್ಟ್ ಹುದ್ದೆಗಳಿಗೆ 7ನೇ ತರಗತಿ ಮತ್ತು ಅಟೆಂಡೆಂಟ್ ಹುದ್ದೆಗಳಿಗೆ 10ನೇ ತರಗತಿ/ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 11,2019ರ ಅನ್ವಯ ಕನಿಷ್ಟ 18ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ-1,2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ :

ತಜ್ಞ ವೈದ್ಯ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ,ಆಯುಷ್ ಮೆಡಿಸಿನ್ ಡೀಲರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,821/-ರೂ, ಅಟೆಂಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,356/-ರೂ ಮತ್ತು ಮಲ್ಟಿಪರ್ಪಸ್ ವರ್ಕರ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 10,300/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ,ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://hassan.nic.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕಚೇರಿಯ ವಿಳಾಸಕ್ಕೆ ನವೆಂಬರ್ 11,2019ರ ಸಂಜೆ 4 ಗಂಟೆಯೊಳಗೆ ಅಂಚೆ ಮೂಲಕ ತಲುಪಿಸಬೇಕಿರುತ್ತದೆ.

ಕಚೇರಿಯ ವಿಳಾಸ:
ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ,
ಹಾಸನ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Zilla panchayat recruitment 2019 notification has been released on official website for the recruitment of 19 specialist doctor and various posts.Interested candidates can apply before 11th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+