ಶಾಲಾ ಶಿಕ್ಷಕರ ನೇಮಕಾತಿ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ರಾಜ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆ ದಿನಾಂಕವನ್ನು ಅಕ್ಟೋಬರ್ 2 ರವರೆಗು ಮುಂದೂಡಲಾಗಿದೆ.

ರಾಜ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿಯಿರುವ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ವೃಂದದ 10000 ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಲಾಗಿದೆ.

ಪ್ರಮುಖ ದಿನಾಂಕಗಳು

ಆನ್‌ಲೈನ್ ಅರ್ಜಿ ಸಲ್ಲಿಸಲು ವಿಸ್ತರಿಸಲಾದ ಕೊನೆಯ ದಿನಾಂಕ: 02.10.2017
ಬ್ಯಾಂಕ್ ನಲ್ಲಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 04.10.2017

ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯಲ್ಲಿ ಅರ್ಹತೆ ಗಳಿಸಿ ಅರ್ಹತಾ ಪ್ರಮಾಣಪತ್ರವನ್ನು ಪಡೆದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿಯನ್ನು ಆನ್-ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ಶಿಕ್ಷಕರ ನೇಮಕಾತಿ:ಗಡುವು ವಿಸ್ತರಣೆ

ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ, ವೇತನ ಮತ್ತು ವಯೋಮಿತಿ ವಿವರಗಳು ಈ ಕೆಳಕಂಡಂತಿದೆ.

ನೇಮಕಾತಿ

ಅಭ್ಯರ್ಥಿಗಳ ವೆಯಿಟೆಜ್ ಮತ್ತು ಡೆರೈವ್ಡ್ ಪರ್ಸೆಂಟೆಜ್ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.

ವಯೋಮಿತಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 21 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಗರಿಷ್ಠ ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 40 ವರ್ಷ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 43 ವರ್ಷ ಪ.ಜಾ/ಪ.ಪಂ/ಪ್ರವರ್ಗ-1/ ವಿಕಲಚೇತನ ಅಭ್ಯರ್ಥಿಗಳಿಗೆ: 45 ವರ್ಷ

ವೇತನ ಶ್ರೇಣಿ : ರೂ.14550 - 26700/-

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಒಂದೇ ಅರ್ಜಿಯಲ್ಲಿ ಒಂದಕ್ಕಿಂತ ಹೆಚ್ಚು ವಿಷಯದ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಶುಲ್ಕ

  • ಪ.ಜಾ/ಪ.ಪಂ/ಪ್ರ-1 ರ ಅಭ್ಯರ್ಥಿಗಳು ಒಂದು ಹುದ್ದೆಗೆ ರೂ.250/-
  • ಎರಡು ಹುದ್ದೆಗೆ ರೂ.400/- ಮೂರು ಹುದ್ದೆಗೆ ರೂ.550/-
  • ಸಾಮಾನ್ಯ ಮತ್ತು ಇತರ ಅಭ್ಯರ್ಥಿಗಳು ಒಂದು ಹುದ್ದೆಗೆ ರೂ.500/-
  • ಎರಡು ಹುದ್ದೆಗೆ ರೂ.150/- ಮೂರು ಹುದ್ದೆಗೆ ರೂ.1000/-

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Online Application submission date has been extended for the recruitment of 10000 graduate higher primary school teachers.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+