ರಾಜ್ಯಕ್ಕೆ 124 ಹೆಚ್ಚುವರಿ ವೈದ್ಯಕೀಯ ಸೀಟುಗಳು

Posted By:

ವಿವಿಧ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳು ಸೇರಿದಂತೆ ದೇಶಾದ್ಯಂತ ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಿದ್ದು, ರಾಜ್ಯದ 10 ವೈದ್ಯಕೀಯ ಕಾಲೇಜುಗಳಿಗೆ 124 ಸ್ನಾತಕೋತ್ತರ ವೈದ್ಯಕೀಯ ಸೀಟುಗಳು ಹೆಚ್ಚುವರಿಯಾಗಿ ದೊರಕಿದೆ.

ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ವಿಭಾಗದಲ್ಲಿ ನಾಲ್ಕು ಸಾವಿರ ಹೆಚ್ಚುವರಿ ಸೀಟುಗಳನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದ್ದು, ರಾಜ್ಯಕ್ಕೆ 124 ಸೀಟುಗಳು ಹಂಚಿಕೆಯಾಗಿವೆ.

ಹೆಚ್ಚುವರಿ ವೈದ್ಯಕೀಯ ಸೀಟುಗಳು

2017-18 ರಲ್ಲಿ 4,193 ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಹೆಚ್ಚುವರಿಯಾಗಿ ಮಂಜೂರುಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ ಕಳೆದ ತಿಂಗಳು ಹೇಳಿದ್ದರು. ಹೊಸದಾಗಿ ಮಂಜೂರಾದ ಸೀಟುಗಳೂ ಸೇರಿದಂತೆ ದೇಶದಲ್ಲಿ ಒಟ್ಟು 35,117 ಸ್ನಾತಕೋತ್ತರ ವೈದ್ಯಕೀಯ ಸಿಟುಗಳು ಈಗ ಲಭ್ಯವಿದೆ.

ರಾಜ್ಯದಲ್ಲಿ ಲಭ್ಯವಿರುವ ಸೀಟುಗಳ ವಿವರ

  • ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ 24
  • ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ 21
  • ಬೆಂಗಳೂರಿನ ಉದ್ಯೋಗಿಗಳ ರಾಜ್ಯ ವಿಮಾ ನಿಗಮದ ವೈದ್ಯಕೀಯ ಕಾಲೇಜು 18
  • ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ 5
  • ಮೈಸೂರಿನ ಸರ್ಕಾರಿ ವೈದ್ಯಕೀಯ ಕಾಲೇಜು 10
  • ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಗೆ 10
  • ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ 9
  • ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ 2
  • ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ 16
  • ಸಂಜಯ ಗಾಂಧಿ ತುರ್ತು ಸೇವಾ ಘಟಕ ಮತ್ತು ಮೂಳೆ ವೈದ್ಯಕೀಯ ಸಂಸ್ಥೆ 9

ದೇಶದಲ್ಲಿರುವ ವೈದ್ಯಕೀಯ ಶಿಕ್ಷಣ ಸುಧಾರಿಸಲು ಹಾಗೂ ವೈದ್ಯಕೀಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಈ ರೀತಿಯ ಕ್ರಮ ಕೈಗೊಂಡಿದ್ದು, ಈಗ ನೀಡಲಾಗಿರುವ ಹೆಚ್ಚುವರಿ ಸೀಟುಗಳ ಜೊತೆ ಮತ್ತೆ 1000 ಸೀಟುಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

English summary
The government has approved a record number of over 4,000 PG medical seats in various medical colleges and hospitals for the academic session 2017-18.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia