ದ್ವಿತೀಯ ಪಿಯುಸಿ ಫಲಿತಾಂಶ: 132 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ

Posted By:

ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 132 ಕಾಲೇಜುಗಳಿಗೆ ಶೂನ್ಯ ಫಲಿತಾಂಶ ಬಂದಿದೆ. ಕಳೆದ ವರ್ಷ 91 ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದಿದ್ದವು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 41 ಕಾಲೇಜುಗಳು ಸಂಖ್ಯೆ ಹೆಚ್ಚಾಗಿದೆ.

ಕಳೆದ ಐದು ವರ್ಷಗಳಲ್ಲಿ ಫಲಿತಾಂಶದಲ್ಲಿ ಬಾರಿ ಇಳಿಕೆ ಕಂಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.5ರಷ್ಟು ಇಳಿಕೆಯಾಗಿದೆ.

ಇನ್ನು ಶೂನ್ಯ ಫಲಿತಾಂಶ ಪಡೆದ ಕಾಲೇಜುಗಳ ವಿವರ

ಮಾರ್ಚ್ 2017ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 132 ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದಿದ್ದು ಅವುಗಳಲ್ಲಿ ಅನುದಾನ ರಹಿತ ಕಾಲೇಜುಗಳ ಸಂಖ್ಯೆ ಹೆಚ್ಚಿದೆ.

ಕಾಲೇಜುಗಳ ಪಟ್ಟಿ

 • ಸರಕಾರಿ ಪದವಿಪೂರ್ವ ಕಾಲೇಜು- 3
 • ಅನುದಾನಿತ ಪದವಿಪೂರ್ವ ಕಾಲೇಜು- 1
 • ಅನುದಾನರಹಿತ ಪದವಿಪೂರ್ವ ಕಾಲೇಜು- 127
 • ವಿಭಜಿತ ಪದವಿಪೂರ್ವ ಕಾಲೇಜು-1

ಪಿಯುಸಿ: 132 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ

   ಈ ಬಾರಿಯ ಫಲಿತಾಂಶದಲ್ಲಿ 37 ಕಾಲೇಜುಗಳಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದಿವೆ. ಕಳೆದ ಬಾರಿ 41 ಕಾಲೇಜುಗಳಲ್ಲಿ ಶೇ.100 ಫಲಿತಾಂಶ ಬಂದಿತ್ತು. [ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಬಾಲಕಿಯರೇ ಮೇಲುಗೈ]

   ಕಾಲೇಜುಗಳ ವಿವರ

   • ಸರಕಾರಿ ಪದವಿಪೂರ್ವ ಕಾಲೇಜು- 03
   • ಅನುದಾನಿತ ಪದವಿಪೂರ್ವ ಕಾಲೇಜು- 02
   • ಅನುದಾನರಹಿತ ಪದವಿಪೂರ್ವ ಕಾಲೇಜು- 32
   • ವಿಭಜಿತ ಪದವಿಪೂರ್ವ ಕಾಲೇಜು-00

   ಕಳೆದ ಆರು ವರ್ಷಗಳಿಗೆ ಹೋಲಿಸಿದರೆ ಅಂದರೆ 2011ರಲ್ಲಿ ಶೇ 48.93ರಷ್ಟು ಫಲಿತಾಂಶ ಬಂದಿತ್ತು. ಆ ನಂತರ ಈ ಬಾರಿ ಬಂದಿರುವುದು (ಶೇ 52.38ರಷ್ಟು) ಅತಿ ಕಡಿಮೆ ಫಲಿತಾಂಶ ಬಂದಿದೆ.

   ಕಡಿಮೆ ಫಲಿತಾಂಶಕ್ಕೆ ಕಾರಣ

   ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಅತ್ಯಂತ ಬಿಗಿ ಭದ್ರತೆಯಲ್ಲಿ ನಡೆಸಲಾಗಿತ್ತು. ನೂತನ ಪರೀಕ್ಷಾ ಕ್ರಮಗಳನ್ನು ಅನುಸರಿಸಿದ್ದ ಶಿಕ್ಷಣ ಇಲಾಖೆಯು ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಕಟ್ಟೆಚ್ಚರ ವಹಿಸಲಾಗಿತ್ತು.

   English summary
   This year the state has obtained only 52.38% in pass percentage. The director of the PU board claimed that the low pass percentage is owing to strict evaluation.

   ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
   Kannada Careerindia