2018 ರ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್ಇ) ಪರೀಕ್ಷೆಗಳು ಮಾರ್ಚ್ ಮೊದಲ ವಾರದಿಂದ ಆರಂಭವಾಗುವ ಸಾಧ್ಯತೆ ಇದೆ.
ಸಿಬಿಎಸ್‌ಇ 10 ಮತ್ತು 12ನೇ ತರಗತಿ ಪರೀಕ್ಷೆಗಳು ಮಾರ್ಚ್ ಮೊದಲ ವಾರದಿಂದ ಆರಂಭವಾಗೊಂಡು 45 ದಿನದೊಳಗೆ ಎರಡೂ ತರಗತಿಯ ಪರೀಕ್ಷೆ ಮುಗಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಮಂಡಳಿಯ ಅಧಿಕೃತ ಪ್ರಕಟಣೆ ಹೊರ ಬೀಳಬೇಕಿದೆ.

2017 ರ ಆರಂಭದಲ್ಲಿ ಸಿಬಿಎಸ್ಇ ಫೆಬ್ರವರಿ ತಿಂಗಳಿನಲ್ಲಿ ಪರೀಕ್ಷೆ ನಡೆಸುವುದಾಗಿ ಘೋಷಿಸಿತ್ತು. ಆದರೆ ಚುನಾವಣೆ ಹಿನ್ನೆಲೆ ಪರೀಕ್ಷೆಯನ್ನು ಮುಂದೂಡಲಾಗಿದೆ.
ಮೇಘಾಲಯ, ನಾಗಾಲ್ಯಾಂಡ್, ತ್ರಿಪುರಾ ಮತ್ತು ಕರ್ನಾಟಕ ರಾಜ್ಯಗಳ ಚುನಾವಣೆ ಇರುವುದರಿಂದ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ವ್ಯತ್ಯಾಸವಾಗಲಿದೆ. ಕಳೆದ ಬಾರಿ ಕೂಡ ಗೋವಾ, ಪಂಜಾಬ್, ಉತ್ತರ ಪ್ರದೇಶ, ಮಣಿಪುರ ಮತ್ತು ಉತ್ತರಾಖಂಡದ 5 ರಾಜ್ಯಗಳಲ್ಲಿ ಚುನಾವಣೆ ನಡೆದ ಕಾರಣ ಸಿಬಿಎಸ್ಇ ಬೋರ್ಡ್ ಪರೀಕ್ಷೆ 9 ದಿನಗಳ ವಿಳಂಬವಾಗಬೇಕಾಯಿತು.
ಪರೀಕ್ಷೆ ತಡವಾಗಿ ಆರಂಭವಾಗಿ ಬೇಗ ಮುಗಿಯಲಿದೆ ಎಂದು ಮಂಡಳಿ ತಿಳಿಸಿದೆ. 45 ರಿಂದ 50 ದಿನದೊಳಗೆ ಎಲ್ಲ ಪರೀಕ್ಷೆಗಳನ್ನು ಮುಗಿಸಲಾಗುವುದು ಎಂದು ಹೇಳಿದೆ.
ಪರೀಕ್ಷೆಯನ್ನು ಕಡಿಮೆ ಅವಧಿಯಲ್ಲಿ ಮುಗಿಸಿ ಮೌಲ್ಯಮಾಪನಕ್ಕೆ ಹೆಚ್ಚಿನ ಅವಧಿ ನೀಡಲಾಗುವುದು ಎಂದು ಸಿಬಿಎಸ್ಇ ಅಧಿಕಾರಿಗಳು ತಿಳಿಸಿದ್ದಾರೆ. ಮೌಲ್ಯಮಾಪನದಲ್ಲಿ ಯಾವುದೇ ವ್ಯತ್ಯಾಸ ಆಗಬಾರದು ಮತ್ತು ನಿಗದಿತ ಸಮಯಕ್ಕೆ ಫಲಿತಾಂಶ ನೀಡುವ ಉದ್ದೇಶದಿಂದ ಮೌಲ್ಯಮಾಪನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪರೀಕ್ಷೆಗಳ ಕಾಲಾವಧಿ ಕಡಿಮೆ ಇರುವುದರಿಂದ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಪರೀಕ್ಷೆಯಿಂದ ಪರೀಕ್ಷೆಗೆ ಕಡಿಮೆ ಅಂತರವಿದ್ದು ವಿದ್ಯಾರ್ಥಿಗಳಿಗೆ ಓದಲು ಕಡಿಮೆ ಕಾಲಾವಕಾಶ ದೊರೆಯುವುದು ವಿದ್ಯಾರ್ಥಿಗಳಲ್ಲಿ ಬೇಸರ ಮೂಡಿಸಿದೆ.


Click it and Unblock the Notifications











