Diploma Course Equal To PU : ಇನ್ನುಮುಂದೆ ನೇರ ನೇಮಕಾತಿ ಮತ್ತು ಉನ್ನತ ಶಿಕ್ಷಣ ಪಡೆಯಲು ಡಿಪ್ಲೋಮಾ ಕೋರ್ಸ್ ಪಿಯುಸಿ ಗೆ ಸಮ

3 ವರ್ಷದ ಡಿಪ್ಲೋಮಾ ಕೋರ್ಸ್ ಪಿಯುಸಿಗೆ ಸಮ : ಶಿಕ್ಷಣ ಇಲಾಖೆ ಘೋಷಣೆ

ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಅನ್ನು ಪಿಯುಸಿ ವಿದ್ಯಾರ್ಹತೆ ತತ್ಸಮಾನ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಘೋಷಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶರಣಪ್ಪ ನಡವಳಿ ಹೊರಡಿಸಿದ್ದು, 'ನೇರ ನೇಮಕಾತಿ/ಅನುಕಂಪದ ಆಧಾರದ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯಲು ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಶಿಕ್ಷಣವನ್ನು ಪಿ.ಯು.ಸಿ.ಗೆ ತತ್ಸಮಾನವೆಂದು ಪರಿಗಣಿಸಲಾಗುವುದು ಮತ್ತು 2015 ಕ್ಕಿಂತ ಹಿಂದಿನ ವರ್ಷಗಳಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಕೆ.ಪಿ.ಎಸ್.ಸಿ ಯಿಂದ ನಡೆಸುವ ಇಲಾಖಾ ಪರೀಕ್ಷೆಗಳ ಜೊತೆಗೆ ಕನ್ನಡ ಭಾಷಾ ಪರೀಕ್ಷೆಯನ್ನು ತೇರ್ಗಡೆ ಹೊಂದಬೇಕು.' ಎಂದು ಸ್ಪಷ್ಟಪಡಿಸಿದ್ದಾರೆ.

ಈ ವಿಷಯದಲ್ಲಿ ಇದ್ದಂತಹ ಗೊಂದಲವನ್ನು ನಿವಾರಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಹಲವು ಸುತ್ತಿನ ಸಭೆ ನಡೆಸಿ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಬಿಇ ವ್ಯಾಸಂಗದ ಲ್ಯಾಟರಲ್ ಎಂಟ್ರಿಗೂ ಈ ಮೂಲಕ ಅವಕಾಶ ನೀಡಲಾಗಿದೆ. ಈ ಕುರಿತು ನಿರ್ಧರಿಸಲೆಂದು ಈ ಮುನ್ನ ಸಮಿತಿ ರಚಿಸಲು ಆದೇಶಿಸಲಾಗಿತ್ತು. ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಚರ್ಚೆ ನಡೆದಿದ್ದು, ಸಮಿತಿಯು ವಿಸ್ತಾರವಾಗಿ ಚರ್ಚಿಸಿ, ಸಾಧಕ-ಬಾಧಕಗನ್ನು ಪರಿಗಣಿಸಿ ದಿನಾಂಕ 31-03-2021ರಂದು ಸರ್ಕಾರಕ್ಕೆ ಸಭಾ ನಡವಳಿಯೊಂದಿಗೆ ವರದಿ ಸಲ್ಲಿಸಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka primary and higher education department announced 3 year diploma course is equal to puc for jobs and higher education.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+