30 Engineering Colleges Selected For Super 30 : ಕರ್ನಾಟಕದ 30 ಇಂಜಿನಿಯರಿಂಗ್ ಕಾಲೇಜುಗಳ ಆಯ್ಕೆ

14 ಸರ್ಕಾರಿ ಕಾಲೇಜುಗಳು ಸೇರಿದಂತೆ ರಾಜ್ಯದ 30 ಎಂಜಿನಿಯರಿಂಗ್ ಕಾಲೇಜುಗಳನ್ನು ಪ್ರಾದೇಶಿಕ ಪರಿಸರ ವ್ಯವಸ್ಥೆ ತಾಂತ್ರಿಕ ಶ್ರೇಷ್ಠತೆ (ಆರ್‌ಇಟಿಇ)ಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಸೂಪರ್ 30ಗಾಗಿ 14 ಸರ್ಕಾರಿ ಕಾಲೇಜುಗಳ ಆಯ್ಕೆ

ಮುಂದಿನ ಐದು ವರ್ಷಗಳಲ್ಲಿ ರಾಜ್ಯದಾದ್ಯಂತ ಈ ಆಯ್ದ ಎಂಜಿನಿಯರಿಂಗ್ ಕಾಲೇಜುಗಳನ್ನು ಜಾಗತಿಕ ಗುಣಮಟ್ಟದ ತಾಂತ್ರಿಕ ಕಾಲೇಜುಗಳಾಗಿ ಅಭಿವೃದ್ಧಿಪಡಿಸುವ ಉದ್ದೇಶವನ್ನು RETE ಹೊಂದಿದೆ ಎಂದು ಅವರು ಹೇಳಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊಫೆಸರ್ ಕರಿಸಿದ್ದಪ್ಪ ನೇತೃತ್ವದ ಉನ್ನತಾಧಿಕಾರ ಸಮಿತಿಯು ಆರ್‌ಇಟಿಇ ಕುರಿತು ಸಲ್ಲಿಸಿದ ವರದಿಯನ್ನು ಸ್ವೀಕರಿಸಿದ ನಂತರ ಶ್ರೀ ನಾರಾಯಣ್ ಸುದ್ದಿಗಾರರೊಂದಿಗೆ ಮಾತನಾಡಿ, ಆರ್‌ಇಟಿಇಯಿಂದ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ಸಚಿವರು ಹೇಳಿದರು.

ರಾಜ್ಯಾದ್ಯಂತ ಮೂವತ್ತು ಕಾಲೇಜುಗಳನ್ನು ಆರ್‌ಇಟಿಇಗೆ ಆಯ್ಕೆ ಮಾಡಲಾಗಿದ್ದು, ಇವುಗಳನ್ನು ಪರಿಪೋಷಣೆ (ಇನ್ಕ್ಯುಬೇಷನ್), ಆ್ಯಕ್ಸಲೇಟರ್ ಮತ್ತು ಸೂಪರ್-30 ಎನ್ನುವ ಮೂರು ವಿಭಾಗಗಳಡಿ ಪರಿಗಣಿಸಲಾಗಿದೆ. ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಮಾತ್ರ ಖಾಸಗಿ ಎಂಜಿನಿಯರಿಂಗ್ ಸಂಸ್ಥೆಗಳನ್ನು ಆರಿಸಿಕೊಳ್ಳಲಾಗಿದೆ' ಎಂದರು.

ಸರ್ಕಾರ, ಕೈಗಾರಿಕೆ ಮತ್ತು ವಿಟಿಯು ಜಂಟಿ ಸಹಯೋಗದಲ್ಲಿ RETE ಅನ್ನು ಜಾರಿಗೊಳಿಸಲಾಗುವುದು ಎಂದು ಸಚಿವರ ಕಚೇರಿ ತಿಳಿಸಿದೆ.

ಸೂಪರ್ 30ಗಾಗಿ 14 ಸರ್ಕಾರಿ ಕಾಲೇಜುಗಳ ಆಯ್ಕೆ

ಆಯ್ಕೆಯಾಗಿರುವ ಸರ್ಕಾರಿ ಕಾಲೇಜುಗಳು :

ಚಾಮರಾಜನಗರ, ಚಳ್ಳಕೆರೆ, ಹಾಸನ, ಹಾವೇರಿ, ಕುಶಾಲನಗರ, ತಲಕಾಡು, ಕೃಷ್ಣರಾಜಪೇಟೆ, ರಾಯಚೂರು, ರಾಮನಗರ, ಕಾರವಾರ, ಹೂವಿನಹಡಗಲಿಗಳಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು, ಬೆಂಗಳೂರಿನ ಎಸ್.ಕೆ.ಎಸ್.ಜೆ.ಟಿ.ಐ., ದಾವಣಗೆರೆಯಲ್ಲಿರುವ ಯೂನಿವರ್ಸಿಟಿ ಬಿಡಿಟಿ ಕಾಲೇಜು ಮತ್ತು ಕಲಬುರಗಿಯಲ್ಲಿರುವ ವಿಟಿಯು ಪಿಜಿ ಸೆಂಟರ್.

ಆಯ್ಕೆಯಾಗಿರುವ ಖಾಸಗಿ ಕಾಲೇಜುಗಳು :

1. ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್, ಬೆಳಗಾವಿ

2. ಚನ್ನಬಸವೇಶ್ವರ ಎಂಜಿನಿಯರಿಂಗ್ ಕಾಲೇಜು, ಗುಬ್ಬಿ (ತುಮಕೂರು ಜಿಲ್ಲೆ)

3. ಶ್ರೀಮಧ್ವ ವಾದಿರಾಜ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ಕಾಲೇಜು, ಉಡುಪಿ

4. ಜಿಎಸ್ಎಸ್ಎಸ್ ಮಹಿಳಾ ಎಂಜಿನಿಯರಿಂಗ್ & ಟೆಕ್ನಾಲಜಿ ಸಂಸ್ಥೆ, ಮೈಸೂರು.

5. ಡಾ.ಟಿ ತಿಮ್ಮಯ್ಯ ತಾಂತ್ರಿಕ ಶಿಕ್ಷಣ ಕಾಲೇಜು, ಕೆಜಿಎಫ್ (ಕೋಲಾರ ಜಿಲ್ಲೆ)

6. ಬಿಳುಗೂರು ಗುರುಬಸವ ಮಹಾಸ್ವಾಮೀಜಿ ಇನ್ಸ್ಟಿಟ್ಯೂಟ್, ಮುಧೋಳ (ಬಾಗಲಕೋಟೆ ಜಿಲ್ಲೆ)

7. ಪಿ.ಜಿ.ಹಳಕಟ್ಟಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿ, ವಿಜಯಪುರ

8. ಆದಿಚುಂಚನಗಿರಿ ತಾಂತ್ರಿಕ ಕಾಲೇಜು, ಚಿಕ್ಕಮಗಳೂರು

9. ಎಸ್.ಜೆ.ಸಿ. ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿ, ಚಿಕ್ಕಬಳ್ಳಾಪುರ

10. ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜು, ಬಳ್ಳಾರಿ

11. ಪಿಇಎಸ್ ತಾಂತ್ರಿಕ & ಮ್ಯಾನೇಜ್ಮೆಂಟ್ ಸಂಸ್ಥೆ, ಶಿವಮೊಗ್ಗ

12. ಭೀಮಣ್ಣ ಖಂಡ್ರೆ ತಾಂತ್ರಿಕ ಕಾಲೇಜು, ಭಾಲ್ಕಿ (ಬೀದರ್ ಜಿಲ್ಲೆ)

13. ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜು, ಗದಗ

14. ವಿವೇಕಾನಂದ ಎಂಜಿನಿಯರಿಂಗ್ & ತಾಂತ್ರಿಕ ಕಾಲೇಜು, ಪುತ್ತೂರು (ದಕ್ಷಿಣ ಕನ್ನಡ ಜಿಲ್ಲೆ)

15. ಜೈನ್ ಎಂಜಿನಿಯರಿಂಗ್ ಕಾಲೇಜು, ಹುಬ್ಬಳ್ಳಿ

16. ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜು, ಶೋರಾಪುರ (ಯಾದಗಿರಿ ಜಿಲ್ಲೆ)

For Quick Alerts
ALLOW NOTIFICATIONS  
For Daily Alerts

English summary
14 government and 16 private engineering colleges from karnataka selected for RETE scheme to make super 30 in 5 years.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X