ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ ಪ್ರವೇಶಾತಿ: 42 ಸೀಟುಗಳು ಖಾಲಿ

ಈ ಬಾರಿ ಇಲ್ಲಿನ ಕೋರ್ಸ್‌ಗಳ ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಟ್ಟಿರುವುದರಿಂದ 42 ಸೀಟುಗಳು ಖಾಲಿ ಉಳಿದಿವೆ ಎಂದು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಚ್.ಯು. ತಳವಾರ ಹೇಳಿದ್ದಾರೆ.

ಕರ್ನಾಟಕ ಸರ್ಕಾರ ನಡೆಸುತ್ತಿರುವ ಏಕೈಕ ಸಿನಿಮಾ ಸಂಸ್ಥೆಯಾದ, ಹೆಸರಘಟ್ಟದಲ್ಲಿರುವ ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಈ ಬಾರಿ 42 ಸೀಟುಗಳು ಖಾಲಿ ಉಳಿದಿವೆ.

ಈ ಬಾರಿ ಇಲ್ಲಿನ ಕೋರ್ಸ್‌ಗಳ ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಟ್ಟಿರುವುದರಿಂದ 42 ಸೀಟುಗಳು ಖಾಲಿ ಉಳಿದಿವೆ ಎಂದು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಚ್.ಯು. ತಳವಾರ ಹೇಳಿದ್ದಾರೆ.

ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ ಪ್ರವೇಶಾತಿ

ಈ ಸಂಸ್ಥೆಯು ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದಲ್ಲಿ ಬರುತ್ತದೆ. ಒಟ್ಟು ಇಲ್ಲಿ 66 ಸೀಟುಗಳಿದ್ದು, ಈ ಪೈಕಿ 24 ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪಡೆದಿದ್ದಾರೆ. ಆದರೆ, ಆ.15ಕ್ಕೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಹೊರರಾಜ್ಯದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡದಿರುವುದರಿಂದ ಹೆಚ್ಚಿನ ಸೀಟುಗಳು ಖಾಲಿ ಉಳಿದಿವೆ ಎಂದು ಇಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಿದ ಬಳಿಕ ಉಳಿಯುವ ಸೀಟುಗಳನ್ನು ಮಾತ್ರ ಹೊರರಾಜ್ಯದ ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ತಾಂತ್ರಿಕ ಶಿಕ್ಷಣ ಇಲಾಖೆಗೆ ಉನ್ನತ ಶಿಕ್ಷಣ ಇಲಾಖೆ ಬರೆದಿರುವ ಪತ್ರದಲ್ಲಿ ತಿಳಿಸಿದೆ.

ಇದು ಕರ್ನಾಟಕ ಸರ್ಕಾರ ನಡೆಸುತ್ತಿರುವ ಏಕೈಕ ಸಿನಿಮಾ ಸಂಸ್ಥೆಯಾಗಿದ್ದು, ಈ ಸಂಸ್ಥೆಯು ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದಲ್ಲಿ ಬರುತ್ತದೆ. ಇಲ್ಲಿ ಮೂರು ವರ್ಷಗಳ ಡಿಪ್ಲೋಮಾ ಸಿನೆಮಾಟೋಗ್ರಫಿ ಮತ್ತು ಸೌಂಡ್ ರೆಕಾರ್ಡಿಂಗ್ ಅಂಡ್ ಇಂಜಿನಿಯರಿಂಗ್ ಕೋರ್ಸ್‌ಗಳನ್ನು ಹೇಳಿಕೊಡಲಾಗುತ್ತದೆ. ಆರಂಭದಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುತಿತ್ತು, 2011 ರಿಂದ ಹೊರ ರಾಜ್ಯದವರಿಗೂ ಪ್ರವೇಶ ಕಲ್ಪಿಸಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
This time 42 seats are vacant at the Government Film and Television Institute in Hesaraghatta, the only cinema school run by the Government of Karnataka.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X