74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವದೆಹಲಿಯಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ನಂತರ, ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಮೇಕ್ ಇನ್ ಇಂಡಿಯಾ ಜೊತೆಗೆ ಮೇಕ್ ಫಾರ್ ವರ್ಲ್ಡ್ ಘೋಷವಾಖ್ಯದೊಂದಿಗೆ ಮುನ್ನುಗ್ಗಬೇಕಿದೆ ಎಂದು ಹೇಳಿದ್ದಾರೆ.
ಇಡೀ ವಿಶ್ವವೇ ಒಂದು ಕುಟುಂಬ ಎಂದು ಭಾರತ ನಂಬಿದೆ. ನಾವು ಆರ್ಥಿಕತೆ ಮತ್ತು ಅಭಿವೃದ್ಧಿ ಕಡೆಗೆ ಗಮನಹರಿಸುವಾಗ ಮಾನವೀಯತೆಯನ್ನು ಬಿಡಬಾರದು ಎಂದು ಹೇಳಿದರು .
ಆಧುನಿಕ ಭಾರತ ನಿರ್ಮಾಣದಲ್ಲಿ ದೇಶದ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ಇದೆ, ರಾಷ್ಟ್ರೀಯ ಶಿಕ್ಷಣ ನೀತಿ ಎಲ್ಲಾ ವಿದ್ಯಾರ್ಥಿಗಳನ್ನು ಒಂದುಗೂಡಿಸುತ್ತದೆ. ಒಂದೇ ರೀತಿಯ ಶಿಕ್ಷಣ ಪಡೆಯುತ್ತಾರೆ. ರಾಷ್ಟ್ರೀಯ ಶಿಕ್ಷಣ ನೀತಿ, ಒಂದು ದೇಶ ಒಂದು ರೇಷನ್ ಕಾರ್ಡ್ ಯಾವುದೇ ಇರಲಿ ಪರಿವರ್ತನೆಯ ಕಾಲಘಟ್ಟವನ್ನು ವಿಶ್ವ ನೋಡುತ್ತಿದೆ ಎಂದು ಮಾತನಾಡಿದ್ದಾರೆ.
For Daily Alerts