ಆಗಸ್ಟ್ 31 ರೊಳಗೆ ಆಧಾರ್ ನೋಂದಣಿ ಮಾಡಿಸುವಂತೆ ಕೇಂದ್ರ ಸರ್ಕಾರದ ಸೂಚನೆ

ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ಯಾವುದೇ ತೊಂದರೆ ಇಲ್ಲದೇ ಪೂರೈಕೆಯಾಗುವಂತೆಮಾಡಲು ಎಲ್ಲ ಮಕ್ಕಳ ಆಧಾರ್‌ ಮಾಹಿತಿಯನ್ನು ನೀಡುವಂತೆಯೂ ತಿಳಿಸಲಾಗಿದೆ.

ಶಾಲಾ ವಿದ್ಯಾರ್ಥಿಗಳ ಆಧಾರ್ ನೋಂದಣಿ ಪೂರ್ಣಗೊಳಿಸುವಂತೆ ಕರ್ನಾಟಕ ಹಾಗೂ ಇತರ 15 ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಈ ಹಿಂದೆ ಫೆಬ್ರವರಿಯಲ್ಲಿ ನೀಡಿದ್ದ ಅಧಿಸೂಚನೆಯಂತೆ ಜೂನ್ 30 ರೊಳಗೆ ಆಧಾರ್ ನೋಂದಣಿ ಮಾಡಬೇಕೆಂದು ತಿಳಿಸಲಾಗಿತ್ತು. ಈಗ ಗಡುವನ್ನು ವಿಸ್ತರಿಸಿದ್ದು ಆಗಸ್ಟ್‌ 31ರ ಒಳಗಾಗಿ ಎಲ್ಲ ಶಾಲೆಗಳ ಮಕ್ಕಳ ಆಧಾರ್‌ ನೋಂದಣಿ ಪೂರ್ಣಗೊಳಿಸುಲು ಸೂಚಿಸಿದೆ.

ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ಯಾವುದೇ ತೊಂದರೆ ಇಲ್ಲದೇ ಪೂರೈಕೆಯಾಗುವಂತೆಮಾಡಲು ಎಲ್ಲ ಮಕ್ಕಳ ಆಧಾರ್‌ ಮಾಹಿತಿಯನ್ನು ನೀಡುವಂತೆಯೂ ತಿಳಿಸಲಾಗಿದೆ.

ಆಗಸ್ಟ್ 31 ರೊಳಗೆ ಆಧಾರ್ ನೋಂದಣಿ

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಈ ಕುರಿತು ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಿತ್ತು, ಬಿಸಿಯೂಟದ ಯೋಜನೆಯಡಿ ಕಾರ್ಯನಿರ್ವಹಿಸುವ ಅಡಿಗೆಯವರು ಹಾಗೂ ಅಡಿಗೆ ಸಹಾಯಕರು ಮತ್ತು ವಿದ್ಯಾರ್ಥಿಗಳು ಕಡ್ಡಾಯ ಆಧಾರ್ ಸಂಖ್ಯೆ ಹೊಂದಿರುಬೇಕು ಎಂದು ತಿಳಿಸಿತ್ತು.

ಆಧಾರ್ ಕಡ್ಡಾಯಗೊಳಿಸಲು ಕಾರಣ

ಬಿಸಿಯೂಟ ಯೋಜನೆಯಲ್ಲಿ ಕೆಲವು ಅವ್ಯವಹಾರ ನಡೆಯುತ್ತಿದೆ ಎಂಬ ಮಾಹಿತಿ ಪರಿಗಣಿಸಿ, ಕಾರ್ಯಕ್ಷಮತೆ ಮತ್ತು ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ. ಅಲ್ಲದೆ ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ನೀಡಲಾಗುವ ಸಬ್ಸಿಡಿ ಯೋಜನೆಗಳಿಗಾಗಿ ಆಧಾರ್ ಸಂಖ್ಯೆ ಕಡ್ಡಾಯ ಮಾಡಲು ನಿರ್ಧರಿಸಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆ ಪಡೆಯಲು ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆ ಕಡ್ಡಾಯಗೊಳಿಸಿ ಶಾಲೆಗಳಿಗೆ ಈಗಾಗಲೇ ಸುತ್ತೋಲೆ ಕಳುಹಿಸಲಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಸಿಯೂಟ ಯೋಜನೆ

ಈ ಯೋಜನೆಯು ಕೇಂದ್ರ ಸರ್ಕಾರದಿಂದ ಎಲ್ಲ ಶಾಲಾಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟ ಯೋಜನೆಯಾಗಿದೆ. ಶಾಲೆಗೆ ಹೋಗುವ ಮಕ್ಕಳ ಪೌಷ್ಟಿಕತೆಯನ್ನು ಹೆಚ್ಚಿಸುವುದು ಇದರ ಮುಖ್ಯ ಉದ್ದೇಶ. ಈ ಯೋಜನೆಯನ್ನು 2004ರಿಂದ ರಾಷ್ಟ್ರಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯಡಿ ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ಒಳಗೊಂಡ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಉಚಿತ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತದೆ. ಎಲ್ಲ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಇದು ಜಾರಿಯಲ್ಲಿದೆ. ಬಿಸಿಯೂಟ ಯೋಜನೆ ಬಂದ ನಂತರ ಶಾಲಾ ದಾಖಲಾತಿ ಪ್ರಮಾಣ ಏರಿಕೆಯಾಗಿದ್ದು, ಬಡ ಮಕ್ಕಳನ್ನು ಶಾಲೆಗಳತ್ತ ಸೆಳೆಯಲು ಈ ಯೋಜನೆಯು ಅತ್ಯಂತ ಪರಿಣಾಮಕಾರಿಯಾಗಿದೆ.

ಆಧಾರ್ ಕಾರ್ಡ್

ಆಧಾರ್ ಸಂಖ್ಯೆಯು ಪ್ರಾಧಿಕಾರದಿಂದ ನಿರ್ದಿಷ್ಟಪಡಿಸಲಾಗಿರುವ ಪರಿಶೀಲನಾ ಪ್ರಕ್ರಿಯೆಗಳು ತೃಪ್ತಿಕರವಾಗಿ ಪೂರ್ಣಗೊಂಡನಂತರ ಭಾವಿಗುಪ್ರಾವು ("ಪ್ರಾಧಿಕಾರ") ಭಾರತದ ನಿವಾಸಿಗಳಿಗೆ ನೀಡುವ 12 ಅಂಕೆಗಳ ಯಾದೃಚ್ಛಿಕ ಸಂಖ್ಯೆಯಾಗಿರುತ್ತದೆ. ಆಧಾರ್ ಸಂಖ್ಯೆಯು ಯಾವುದೇ ಗುಪ್ತಚರ ಮಾಹಿತಿ ರಹಿತವಾಗಿರುತ್ತದೆ ಹಾಗೂ ಜಾತಿ, ಮತ, ಆದಾಯ, ಆರೋಗ್ಯ, ಭೌಗೋಳಿಕ ಆಧಾರದ ಮೇರೆಗೆ ಜನತೆಯ ಪಾರ್ಶ್ವಚಿತ್ರಣವನ್ನು ನೀಡುವುದಿಲ್ಲ.

ಆಧಾರ್ ಸಂಖ್ಯೆಯು ಗುರುತಿನ ಒಂದು ಸಾಕ್ಷಾಧಾರವಾಗಿರುತ್ತದೆ, ಆದಾಗ್ಯೂ, ಅದು ಆಧಾರ್ ಸಂಖ್ಯೆಯನ್ನು ಹೊಂದಿರುವವರಿಗೆ ಸಂಬಂಧಿಸಿದಂತೆ ಅದು ನಾಗರಿಕತೆಯ ಹಕ್ಕನ್ನು ನೀಡುವುದಿಲ್ಲ.

For Quick Alerts
ALLOW NOTIFICATIONS  
For Daily Alerts

English summary
The Central Government has instructed Karnataka and other 15 States to complete the Aadhaar registration of children of all schools within the year 31st August.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X