ಮಧ್ಯಾಹ್ನದ ಬಿಸಿಯೂಟಕ್ಕೂ ಆಧಾರ್ ಕಾರ್ಡ್ ಕಡ್ಡಾಯ !

ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸಲಿರುವ ಅಡುಗೆಯವರಿಗೆ, ಸಹಾಯಕರಿಗೆ ಹಾಗೂ ಬಿಸಿಯೂಟ ಪಡೆಯಲು ವಿದ್ಯಾರ್ಥಿಗಳಿಗೆ ಇನ್ನುಮುಂದೆ ಆಧಾರ್ ಸಂಖ್ಯೆ ಕಡ್ಡಾಯವಾಗಲಿದೆ.

ಇಷ್ಟು ದಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು, ಶಾಲೆಗಳಲ್ಲಿ ನೋಂದಣಿ ಮಾಡಿಸಲು ಹಾಗು ಪ್ರವೇಶ ಪರೀಕ್ಷೆಗಳನ್ನು ಮಾತ್ರ ಆಧಾರ್ ಕಾರ್ಡ್ ಬಳಸಬೇಕಿತ್ತು, ಆದರೆ ಇನ್ನುಮುಂದೆ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಪಡೆಯಲು ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಲಿದೆ.

ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸಲಿರುವ ಅಡುಗೆಯವರಿಗೆ, ಸಹಾಯಕರಿಗೆ ಹಾಗೂ ಬಿಸಿಯೂಟ ಪಡೆಯಲು ವಿದ್ಯಾರ್ಥಿಗಳಿಗೆ ಇನ್ನುಮುಂದೆ ಆಧಾರ್ ಸಂಖ್ಯೆ ಕಡ್ಡಾಯವಾಗಲಿದೆ.

ಸಚಿವಾಲಯದ ಸೂಚನೆ

ಕಳೆದ ತಿಂಗಳು ಅಂತ್ಯದಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಬಿಸಿಯೂಟದ ಯೋಜನೆಯಡಿ ಕಾರ್ಯನಿರ್ವಹಿಸುವ ಅಡಿಗೆಯವರು ಹಾಗೂ ಅಡಿಗೆ ಸಹಾಯಕರು ಮತ್ತು ವಿದ್ಯಾರ್ಥಿಗಳು ಕಡ್ಡಾಯ ಆಧಾರ್ ಸಂಖ್ಯೆ ಹೊಂದಿರುಬೇಕು ಎಂದು ಹೇಳಿದೆ.

ಗಡುವು

ಆಧಾರ್ ನೋಂದಣಿ ಮಾಡಿಸದ ವಿದ್ಯಾರ್ಥಿಗಳು, ಅಡುಗೆಯವರಿಗೆ, ಸಹಾಯಕರಿಗೆ ಜೂನ್ 30 ರವರೆಗೆ ಅಂತಿಮ ಗಡುವು ನೀಡಿದೆ. ಜಮ್ಮು ಮತ್ತು ಕಾಶ್ಮೀರ, ಮೇಘಾಲಯ ಹಾಗೂ ಅಸ್ಸಾಂ ಹೊರತು ಪಡಿಸಿ ದೇಶದ ಎಲ್ಲ ಪ್ರದೇಶಗಳಿಗೂ ಈ ನಿಯಮ ಅನ್ವಯವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಆಧಾರ್ ಇಲ್ಲದಿದ್ದರೆ ಬಿಸಿಯೂಟ ಇಲ್ಲ

ಆಧಾರ್ ಕಡ್ಡಾಯಗೊಳಿಸಲು ಕಾರಣ

ಬಿಸಿಯೂಟ ಯೋಜನೆಯಲ್ಲಿ ಕೆಲವು ಅವ್ಯವಹಾರ ನಡೆಯುತ್ತಿದೆ ಎಂಬ ಮಾಹಿತಿ ಪರಿಗಣಿಸಿ, ಕಾರ್ಯಕ್ಷಮತೆ ಮತ್ತು ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ. ಅಲ್ಲದೆ ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ನೀಡಲಾಗುವ ಸಬ್ಸಿಡಿ ಯೋಜನೆಗಳಿಗಾಗಿ ಆಧಾರ್ ಸಂಖ್ಯೆ ಕಡ್ಡಾಯ ಮಾಡಲು ನಿರ್ಧರಿಸಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆ ಪಡೆಯಲು ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆ ಕಡ್ಡಾಯಗೊಳಿಸಿ ಶಾಲೆಗಳಿಗೆ ಈಗಾಗಲೇ ಸುತ್ತೋಲೆ ಕಳುಹಿಸಲಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಧಾರ್ ಕಡ್ಡಾಯಕ್ಕೆ ವಿರೋಧ

ಶಾಲಾ ಮಕ್ಕಳ ಬಿಸಿಯೂಟಕ್ಕೂ ಆಧಾರ್ ಕಾರ್ಡ್‌ನ್ನು ಕಡ್ಡಾಯ ಮಾಡಿರುವುದಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ಬಿಸಿಯೂಟಕ್ಕೂ ಆಧಾರ್ ಕಡ್ಡಾಯ ಮಾಡಿರುವ ಹಿನ್ನೆಲೆಯಲ್ಲಿ 'ಸಾಮಾಜಿಕ ಜಾಲತಾಣ ಟ್ವಿಟರ್'ನಲ್ಲಿ ಸರಣಿಯಾಗಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರಕಾರ ವಿರುದ್ಧ ಕಿಡಿಕಾರಿದ್ದಾರೆ. ಕಡು ಬಡತನದಲ್ಲಿರುವ ಬಡವರಿಗೆ, ನಮ್ಮ ನೆಚ್ಚಿನ ಮಕ್ಕಳಿಗೆ ಸಹಾಯ ಮಾಡುವ ಬದಲು, ಅವರನ್ನು ಇನ್ನು ಕೆಳಗೆ ಹಾಕಲಾಗುತ್ತಿದೆ. ಅವರ ಹಕ್ಕನ್ನೇ ಕಿತ್ತುಕೊಳ್ಳಲಾಗುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

ಬಿಸಿಯೂಟ ಯೋಜನೆ

ಈ ಯೋಜನೆಯು ಕೇಂದ್ರ ಸರ್ಕಾರದಿಂದ ಎಲ್ಲ ಶಾಲಾಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟ ಯೋಜನೆಯಾಗಿದೆ. ಶಾಲೆಗೆ ಹೋಗುವ ಮಕ್ಕಳ ಪೌಷ್ಟಿಕತೆಯನ್ನು ಹೆಚ್ಚಿಸುವುದು ಇದರ ಮುಖ್ಯ ಉದ್ದೇಶ. ಈ ಯೋಜನೆಯನ್ನು 2004ರಿಂದ ರಾಷ್ಟ್ರಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯಡಿ ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ಒಳಗೊಂಡ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಉಚಿತ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತದೆ. ಎಲ್ಲ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಇದು ಜಾರಿಯಲ್ಲಿದೆ. ಬಿಸಿಯೂಟ ಯೋಜನೆ ಬಂದ ನಂತರ ಶಾಲಾ ದಾಖಲಾತಿ ಪ್ರಮಾಣ ಏರಿಕೆಯಾಗಿದ್ದು, ಬಡ ಮಕ್ಕಳನ್ನು ಶಾಲೆಗಳತ್ತ ಸೆಳೆಯಲು ಈ ಯೋಜನೆಯು ಅತ್ಯಂತ ಪರಿಣಾಮಕಾರಿಯಾಗಿದೆ.

ಬಿಸಿಯೂಟ ಯೋಜನೆಯ ವೆಬ್ ಪೋರ್ಟಲ್

ಕೇಂದ್ರ ಸರ್ಕಾರವು https://www.mygov.in/ ಮತ್ತು http://pgportal.gov.in/ ಎಂಬ ಎರಡು ಪೋರ್ಟೆಲ್‍ಗಳನ್ನು ಅಭಿವೃದ್ಧಿಪಡಿಸಿದೆ. ಇದು ಕೇಂದ್ರ ಸರ್ಕಾರದ ಮಧ್ಯಾಹ್ನದ ಬಿಸಿಯೂಟ ಯೋಜನೆ ಬಗೆಗಿನ ದೂರುಗಳು ಹಾಗೂ ಸಲಹೆಗಳಿಗೇ ಮೀಸಲಾದ ವೆಬ್‍ಸೈಟ್ ಆಗಿರುತ್ತದೆ.
ಮಧ್ಯಾಹ್ನದ ಬಿಸಿಯೂಟ ಯೋಜನೆಗೆ 2012ರ ಜೂನ್ ತಿಂಗಳಿನಿಂದಲೇ ನಿರ್ವಹಣೆ ಮಾಹಿತಿ ವ್ಯವಸ್ಥೆ ಜಾರಿಯಲ್ಲಿದೆ. ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಇದಕ್ಕೆ ವಾರ್ಷಿಕ ಹಾಗೂ ಮಾಸಿಕ ಮಾಹಿತಿಗಳನ್ನು ನೀಡುತ್ತವೆ. ಈ ಮೂಲಕ ಯೋಜನೆಯನ್ನು ಆನ್‍ಲೈನ್ ಮೂಲಕ ನಿರ್ವಹಿಸಲಾಗುತ್ತದೆ.

ಮಧ್ಯಾಹ್ನದ ಬಿಸಿಯೂಟ ಯೋಜನೆ ಕುರಿತಾದ ಹೆಚ್ಚಿನ ಮಾಹಿತಿಗಾಗಿ http://mdm.nic.in/ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ

More News  

For Quick Alerts
ALLOW NOTIFICATIONS  
For Daily Alerts

English summary
Aadhaar card will become mandatory for students all over the country to avail the midday meal scheme.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+