Adarsha Vidyalaya Admit Card 2022 : 6ನೇ ತರಗತಿ ಪ್ರವೇಶಾತಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಆದರ್ಶ ವಿದ್ಯಾಲಯ 2022-23 ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಆದರ್ಶ ವಿದ್ಯಾಲಯ ಪ್ರವೇಶಾತಿ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

2022-23ನೇ ಶೈಕ್ಷಣಿಕ ಸಾಲಿಗೆ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಆಸಕ್ತರಿಂದ ಫೆಬ್ರವರಿ 26,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಪ್ರವೇಶ ಪರೀಕ್ಷೆಯು ಇದೇ ಏಪ್ರಿಲ್ 10 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಅಭ್ಯರ್ಥಿಗಳು ಆದರ್ಶ ವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ ಅಥವಾ ಎಸ್‌ಎಟಿಎಸ್‌ ಸಂಖ್ಯೆ ಮತ್ತು ಭದ್ರತಾ ಕೋಡ್ ನಮೂದಿಸಿ ಸಬ್‌ಮಿಟ್ ಮಾಡಿ. ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್‌ ಮಾಡಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

ಆದರ್ಶ ವಿದ್ಯಾಲಯ ಪ್ರವೇಶಾತಿ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಆದರ್ಶ ವಿದ್ಯಾಲಯ:

ಕರ್ನಾಟಕ ರಾಜ್ಯದ 74 ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್‌ಗಳಲ್ಲಿ 74 ಆದರ್ಶ ವಿದ್ಯಾಲಯಗಳನ್ನು ನಡೆಸಲಾಗಗುತ್ತಿದೆ. ಈ ಶಾಲೆಗಳಲ್ಲಿ 6 ರಿಂದ 10ನೇ ತರಗತಿ ವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ನಡೆಯುತ್ತಿದೆ. ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿಗಳ ಸಮಗ್ರ ಹಾಗೂ ಬೌದ್ದಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಆದರ್ಶ ವಿದ್ಯಾಲಯಗಳ ಗುರಿಯಾಗಿದೆ. 2022-23ನೇ ಸಾಲಿನಲ್ಲಿ 6ನೇ ತರಗತಿಯ ಮಕ್ಕಳ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯನ್ನು ನಡೆಸಿ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://www.schooleducation.kar.nic.in/ ಗೆ ಭೇಟಿ ನೀಡಿ.

For Quick Alerts
ALLOW NOTIFICATIONS  
For Daily Alerts

English summary
Adarsha vidyalaya released entrance exam admit card 2022 for class 6 admission. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X