Adarsha Vidyalaya Entrance Exam 2022 Date : ಪ್ರವೇಶ ಪರೀಕ್ಷೆಯ ದಿನಾಂಕ ಏ.17ಕ್ಕೆ ಮುಂದೂಡಿಕೆ

ಕರ್ನಾಟಕ ಆದರ್ಶ ವಿದ್ಯಾಲಯ 2022-23 ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸುವ ಪ್ರವೇಶ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ. ಪರೀಕ್ಷೆಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಪರೀಕ್ಷೆಯನ್ನು ಏಪ್ರಿಲ್ 17,2022ರಂದು ನಿಗದಿಪಡಿಸಲಾಗಿದೆ.

ಆದರ್ಶ ವಿದ್ಯಾಲಯದ 6ನೇ ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆ ಏ.17ಕ್ಕೆ ನಿಗದಿ

2022-23ನೇ ಶೈಕ್ಷಣಿಕ ಸಾಲಿಗೆ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಆಸಕ್ತರಿಂದ ಫೆಬ್ರವರಿ 26,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಪ್ರವೇಶ ಪರೀಕ್ಷೆಯು ಇದೇ ಏಪ್ರಿಲ್ 17 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಅಭ್ಯರ್ಥಿಗಳು ಆದರ್ಶ ವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ ಅಥವಾ ಎಸ್‌ಎಟಿಎಸ್‌ ಸಂಖ್ಯೆ ಮತ್ತು ಭದ್ರತಾ ಕೋಡ್ ನಮೂದಿಸಿ ಸಬ್‌ಮಿಟ್ ಮಾಡಿ. ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್‌ ಮಾಡಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

ಆದರ್ಶ ವಿದ್ಯಾಲಯ :

ಕರ್ನಾಟಕ ರಾಜ್ಯದ 74 ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್‌ಗಳಲ್ಲಿ 74 ಆದರ್ಶ ವಿದ್ಯಾಲಯಗಳನ್ನು ನಡೆಸಲಾಗಗುತ್ತಿದೆ. ಈ ಶಾಲೆಗಳಲ್ಲಿ 6 ರಿಂದ 10ನೇ ತರಗತಿ ವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ನಡೆಯುತ್ತಿದೆ. ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿಗಳ ಸಮಗ್ರ ಹಾಗೂ ಬೌದ್ದಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಆದರ್ಶ ವಿದ್ಯಾಲಯಗಳ ಗುರಿಯಾಗಿದೆ.

2021-22ನೇ ಸಾಲಿನಲ್ಲಿ 6ನೇ ತರಗತಿಯ ಮಕ್ಕಳ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯನ್ನು ನಡೆಸಿ ಆಯ್ಕೆ ಮಾಡಲಾಗುವುದು. ಪ್ರವೇಶ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಗುತ್ತಿದ್ದು, ಮಕ್ಕಳು ಯಾವುದೇ ಶುಲ್ಕ ಪಾವತಿಸಬೇಕಾಗಿರುವುದಿಲ್ಲ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://www.schooleducation.kar.nic.in/ ಗೆ ಭೇಟಿ ನೀಡಿ.

More News  

For Quick Alerts
ALLOW NOTIFICATIONS  
For Daily Alerts

English summary
The entrance exam date for class 6th enrollment in adarsha schools for the year 2022-23 has been postponed.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+