AICTE PG Scholarship 2021-22 : ಎಐಸಿಟಿಇ ಶೈಕ್ಷಣಿಕ ವರ್ಷದ ಪಿಜಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಎಐಸಿಟಿಇ ಪಿಜಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

AICTE PG Scholarship 2021: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಪಿಜಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಐಸಿಟಿಇ ಅನುಮೋದಿತ ಸಂಸ್ಥೆಗಳು ಮತ್ತು ಅಂತಹ ಸಂಸ್ಥೆಗಳಲ್ಲಿ ಅಥವಾ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಕೌನ್ಸಿಲ್ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿವೇತನಕ್ಕೆ ಅರ್ಹರಾದ ಪಿಜಿ ವಿದ್ಯಾರ್ಥಿಗಳಿಗೆ ನೇರವಾಗಿ ವಿದ್ಯಾರ್ಥಿವೇತನವನ್ನು ನೀಡಲಾಗುವುದು.

ಎಐಸಿಟಿಇ ಹೊರಡಿಸಿದ ಅಧಿಸೂಚನೆಯ ಪ್ರಕಾರ, ವಿದ್ಯಾರ್ಥಿಗಳು ಐಡಿಗಳನ್ನು ರಚಿಸಲು ಮತ್ತು ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 31, 2021 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿ ಪರಿಶೀಲನೆಯನ್ನು ಜನವರಿ 14, 2022 ರಿಂದ ನಡೆಸಲಾಗುತ್ತದೆ. ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸ್ವೀಕರಿಸಿದ ತಕ್ಷಣವೇ ವಿದ್ಯಾರ್ಥಿಗಳ ಅರ್ಜಿಗಳನ್ನು ಪರಿಶೀಲಿಸುವಂತೆ ಎಐಸಿಟಿಇ ಸಂಸ್ಥೆಗಳಿಗೆ ಸೂಚನೆ ನೀಡಿದೆ.

ಪಿಜಿ ವಿದ್ಯಾರ್ಥಿವೇತನ ಪೋರ್ಟಲ್‌ ಲಾಗಿನ್ ಗಾಗಿ ಅಗತ್ಯವಿರುವ ರುಜುವಾತುಗಳನ್ನು ಸಂಸ್ಥೆಗಳಿಗೆ ಎಐಸಿಟಿಇ ಕಳುಹಿಸಿದೆ. ಭಾರತದಲ್ಲಿ ತಾಂತ್ರಿಕ ಶಿಕ್ಷಣದ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಈ ವಿದ್ಯಾರ್ಥಿವೇತನವನ್ನು ಎಐಸಿಟಿಇ ಪರಿಚಯಿಸಿದೆ. ಎಐಸಿಟಿಇ ಅಂಗೀಕೃತ ಸಂಸ್ಥೆಗಳಲ್ಲಿ ಮತ್ತು ಎಐಸಿಟಿಇ ಅನುಮೋದಿತ ಪಿಜಿ ಕೋರ್ಸ್ ಗಳಲ್ಲಿ ಪೂರ್ಣ ಸಮಯದಲ್ಲಿ ಅಧ್ಯಯನ ಮಾಡುತ್ತಿರುವ ಗೇಟ್-ಜಿಪಿಎಟಿ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಅಂದರೆ 24 ತಿಂಗಳುಗಳ ಕಾಲ ರೂ. 12,400/- ಅನ್ನು ಕೌನ್ಸಿಲ್‌ನಿಂದ ಪಿಜಿ ವಿದ್ಯಾರ್ಥಿವೇತನವಾಗಿ ನೀಡಲಾಗುತ್ತದೆ. ತರಗತಿಗಳು ಪ್ರಾರಂಭವಾದ ದಿನಾಂಕದಿಂದ ತರಗತಿಗಳು ಮುಗಿಯುವವರೆಗೂ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.

ಈ ಸ್ಕಾಲರ್‌ಶಿಪ್ ಅನ್ನು ಯಾವುದೇ ಸಂದರ್ಭದಲ್ಲಿ ವಿಸ್ತರಿಸಲಾಗುವುದಿಲ್ಲ ಮತ್ತು ಈ ಯೋಜನೆಗೆ ಅರ್ಹರಾದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ AICTE- https://aicte-india.org/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ವಿದ್ಯಾರ್ಥಿವೇತನ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
The All India Council of Technical Education has invited the application for the PG Scholarships for the 2021-22 academic year.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X