ರಾಜ್ಯದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಆಂಧ್ರಪ್ರದೇಶ ಸರ್ಕಾರದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಆದೇಶ ನೀಡಿದ್ದಾರೆ.

ದೇಶದೆಲ್ಲೆಡೆ ಕೊರೋನಾ ಮಹಾಮಾರಿ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣ ಮತ್ತು ತಮಿಳುನಾಡು ಸರ್ಕಾರ ಈಗಾಗಲೇ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಇದರ ಬೆನ್ನಲೇ ಈಗ ಆಂಧ್ರ ಪ್ರದೇಶ ಸರ್ಕಾರವು ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಈ ಕುರಿತ ಸ್ಪಷ್ಟೀಕರಣ ನೀಡಿರುವ ಆಂಧ್ರಪ್ರದೇಶದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್, ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೋನಾ ಸೋಂಕು ಈವರೆಗೆ ತಹಬಂದಿದೆ ಬಂದಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೇ ರದ್ದು ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿಗೆ ತರಗತಿಗೆ ಉತ್ತೀರ್ಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
For Quick Alerts
For Daily Alerts
English summary
Andhra pradesh government decides to cancel sslc exam and promote students to next class.
Story first published: Monday, June 22, 2020, 11:46 [IST]


Click it and Unblock the Notifications