ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಆಗಸ್ಟ್ ಒಂದರಿಂದ ಕೌನ್ಸಲಿಂಗ್

Posted By:

1489 ಸಹಾಯಕ ಪ್ರಾಧ್ಯಪಕರ ನೇಮಕಾತಿಗೆ ಸಂಬಂಧಿಸಿದಂತೆ ಕಾಲೇಜು ಶಿಕ್ಷಣ ಇಲಾಖೆ ಮಂಗಳವಾರ ನೂತನ ಅದೇಶ ಹೊರಡಿಸಿದೆ. ದಾಖಲೆ ಪರಿಶೀಲನೆ ನಡೆಯುತ್ತಿದ್ದು, ಆಗಸ್ಟ್ ಮೊದಲ ವಾರದಲ್ಲಿ ಕೌನ್ಸಲಿಂಗ್ ಆರಂಭವಾಗಲಿದೆ.

ವಿವಿಧ ವಿಷಯಗಳ ಈ ಸಹಾಯಕ ಪ್ರಾಧ್ಯಾಪಕರಿಗೆ ಸ್ಥಳ ನಿಯುಕ್ತಿ ಕೌನ್ಸೆಲಿಂಗ್‌ ಆಗಸ್ಟ್‌ 1ರಿಂದ 5ರವರೆಗೆ ನಡೆಸಲಾಗುವುದು ಎಂದು ಇಲಾಖೆ ನಿರ್ದೇಶಕರು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದ್ದು, ಯಾವ ಅಭ್ಯರ್ಥಿಗಳು ಯಾವ ದಿನ ಕೌನ್ಸೆಲಿಂಗ್‌ಗೆ ಹಾಜರಾಗಬೇಕು ಎಂಬ ವೇಳಾಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು ಎಂದು ವಿವರಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಕ್ಕಾಗಿ ವಿಷಯವಾರು ಅರ್ಹ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಎಲ್ಲ ಮೂಲ ದಾಖಲೆಗಳು ಮತ್ತು ಒಂದು ನಕಲು ಪ್ರತಿ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

ಪ್ರಸ್ತುತ ಆಯ್ಕೆಯಾದವರ ದಾಖಲಾತಿ ಪರಿಶೀಲನೆ ನಡೆಯುತ್ತಿದ್ದು, ಅತಿ ಶೀಘ್ರದಲ್ಲಿ ನೇಮಕಾತಿ ಕಾರ್ಯ ಪೂರ್ಣಗೊಳ್ಳಲಿದೆ ನಿರ್ದೇಶಕರು ತಿಳಿಸಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 2,160 ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡಲು 2015ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ನೇಮಕಾತಿಗೆ ಪರೀಕ್ಷೆ ಆಯೋಜಿಸಲಾಗಿತ್ತು. ಪರೀಕ್ಷೆಯಲ್ಲಿ ತೇರ್ಗಡೆಗೊಂಡವರಲ್ಲಿ 2,034 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅಂತಿಮ ಪಟ್ಟಿಯನ್ನು ಕಳೆದ ಫೆಬ್ರುವರಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಗೆ ಕಳುಹಿಸಲಾಗಿತ್ತು.

ನಕಲಿ ದಾಖಲೆಗಳನ್ನು ನೀಡಿರುವ ಸುಮಾರು 90 ಅಭ್ಯರ್ಥಿಗಳನ್ನು ಕೈಬಿಡಲಾಗಿದ್ದು ಎಲ್ಲ ದಾಖಲಾತಿಗಳ ದೃಢೀಕರಣ ಪೂರ್ಣಗೊಂಡವರಿಗೆ ಮಾತ್ರ ನೇಮಕಾತಿ ಆದೇಶ ನೀಡಲಾಗಿದೆ.

English summary
Counseling for 1489 assistant professors starts from August first week Department of collegiate education said.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia