ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಜುಲೈ 18ರಿಂದ ದಾಖಲೆ ಪರಿಶೀಲನೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಕ್ಕಾಗಿ ವಿಷಯವಾರು ಅರ್ಹ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

2160 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ 18ರಿಂದ 27ರವರೆಗೆ ದಾಖಲಾತಿ ಗಳ ಪರಿಶೀಲನೆ ನಡೆಸಲಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಕ್ಕಾಗಿ ವಿಷಯವಾರು ಅರ್ಹ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಎಲ್ಲ ಮೂಲ ದಾಖಲೆಗಳು ಮತ್ತು ಒಂದು ನಕಲು ಪ್ರತಿ ದಾಖಲೆಗಳೊಂದಿಗೆ ಹಾಜರಾಗ ಬೇಕು ಎಂದು ಸೂಚಿಸಲಾಗಿದೆ.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ

ಅಂಗವಿಕಲ ಅಭ್ಯರ್ಥಿಗಳಿಗೆ ಇದೇ 12ರಂದು ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಈ ಅಭ್ಯರ್ಥಿಗಳ ಪಟ್ಟಿಯನ್ನೂ ಸಹ ವೆಬ್‌ಸೈಟ್‌ನಲ್ಲಿ ಪ್ರಕಟಿಸ ಲಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು.

ಹೆಚ್ಚಿನ ವಿವರ ಗಳಿಗೆ ವೆಬ್‌ಸೈಟ್‌ kea.kar.nic.in ಗಮನಿಸಿ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು 2016ರ ಮಾರ್ಚ್‌ನಲ್ಲಿ ಪರೀಕ್ಷೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದ್ದರೂ ಈವರೆಗೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿಲ್ಲ. ಕೂಡಲೇ ಸರ್ಕಾರ ಅಗತ್ಯ ಕ್ರಮ ಕೈಗೊಂಡು ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಇತ್ತೀಚಿಗೆ ಅಭ್ಯರ್ಥಿಗಳು ಧರಣಿ ಕೂತಿದ್ದರು.

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ವಿವಿಧ ವಿಷಯಗಳಲ್ಲಿ 2160 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಸಿಇಟಿ ಮೂಲಕ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2015ರಲ್ಲಿ ಅಧಿಸೂಚನೆ ಹೊರಡಿಸಿತ್ತು ಅದರಂತೆ ಪರೀಕ್ಷೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದ್ದರೂ ಸಹ ಈವರೆವಿಗೂ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿರಲಿಲ್ಲ.

For Quick Alerts
ALLOW NOTIFICATIONS  
For Daily Alerts

English summary
Document verification of selected candidates for the post of assistant professor is on July 18 by Karnataka examination authority.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X