Bangalore University: ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವರ್ಕ್ ಫ್ರಂ ಹೋಂ ನೀಡಲು ಬೆಂಗಳೂರು ವಿವಿ ನಿರ್ಧಾರ

ಬೆಂಗಳೂರು ವಿಶ್ವವಿದ್ಯಾಲಯ ಸಿಬ್ಬಂದಿಗೆ ವರ್ಕ್ ಫ್ರಂ ಹೋಂ

ರಾಜ್ಯದೆಲ್ಲೆಡೆ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಪ್ರಿಲ್ 27ರ ರಾತ್ರಿ 9 ರಿಂದ 14 ದಿನಗಳ ಕಾಲ ಲಾಕ್‌ಡೌನ್ ಅನ್ನು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯವು ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಅವಕಾಶ ನೀಡಿದೆ.

ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಂಯೋಜಿತ ಕಾಲೇಜುಗಳಲ್ಲಿನ ಸ್ನಾತಕೋತ್ತರ ಕೋರ್ಸ್ ನ ನಾಲ್ಕನೇ ಸೆಮಿಸ್ಟರ್ ತರಗತಿಗಳನ್ನು ಆನ್‌ಲೈನ್ ನಲ್ಲಿ ಪ್ರಾರಂಭಿಸುವಂತೆ ಸೂಚನೆ ನೀಡಲಾಗಿದೆ. ಈ ಮುಂಚೆ ಮೊದಲನೇ ಸೆಮಿಸ್ಟರ್ ಗೆ ಆನ್‌ಲೈನ್ ತರಗತಿ ಆರಂಭಿಸಲು ವಿವಿ ಸೂಚನೆ ನೀಡಿತ್ತು. ಇದೀಗ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೂ ಮೇ 5,2021ರಿಂದ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯ ಸಿಬ್ಬಂದಿಗೆ ವರ್ಕ್ ಫ್ರಂ ಹೋಂ

ಬೆಂಗಳೂರು ವಿವಿಯು ಏ.28 ರಿಂದ ಮೇ 11,2021ರ ವರೆಗೆ ವಿವಿಯ ಅಭಿಯಂತರ ವಿಭಾಗ, ಆರೋಗ್ಯ ವಿಭಾಗ, ಸಾರಿಗೆ ವಿಭಾಗ ಹೊರತು ಪಡಿಸಿ ಉಳಿದ ಎಲ್ಲ ವಿಭಾಗದವರು ಮನೆಯಿಂದಲೇ ಕೆಲಸ ನಿರ್ವಹಿಸಬಹುದು. ಎಲ್ಲಾ ಸಿಬ್ಬಂದಿಯು ತುರ್ತು ಪರಿಸ್ಥಿತಿಯಲ್ಲಿ ಸಂಪರ್ಕಿಸಲು ಅವರ ದೂರವಾಣಿ ಸಂಖ್ಯೆಯನ್ನು ಮೇಲಧಿಕಾರಿಗಳಿಗೆ ನೀಡಬೇಕು. ಈ ಅವಧಿಯಲ್ಲಿ ಬೋಧಕೇತರ ಸಿಬ್ಬಂದಿ ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ. ವಿವಿ ಸಿಬ್ಬಂದಿ ಸೇವೆ ಅಗತ್ಯವಿದ್ದಾಗ ಸಂಬಂಧಪಟ್ಟ ವಿಭಾಗ, ಕಚೇರಿಯ ಮುಖ್ಯಸ್ಥರು ಇಚ್ಛಿಸಿದಲ್ಲಿ ಅವರು ಸೂಚಿಸುವ ಅಧಿಕಾರಿ, ಬೋಧಕ, ಬೋಧಕೇತರ ನೌಕರರು ಯಾವುದೇ ಕಾರಣ ನೀಡದೆಯೇ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಬೆಂಗಳೂರು ವಿವಿ ಉಪ ಕುಲಪತಿ ಕೆ.ವೇಣುಗೋಪಾಲ್ ತಿಳಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Bangalore university gave work from home to all teaching and non teaching staff due covid amid.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X