
ರಾಜ್ಯದೆಲ್ಲೆಡೆ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಪ್ರಿಲ್ 27ರ ರಾತ್ರಿ 9 ರಿಂದ 14 ದಿನಗಳ ಕಾಲ ಲಾಕ್‌ಡೌನ್ ಅನ್ನು ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯವು ಮುಂದಿನ ಸೆಮಿಸ್ಟರ್ ಗಳಿಗೆ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ.
ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಂಯೋಜಿತ ಕಾಲೇಜುಗಳಲ್ಲಿನ ಸ್ನಾತಕೋತ್ತರ ಕೋರ್ಸ್ ನ ನಾಲ್ಕನೇ ಸೆಮಿಸ್ಟರ್ ತರಗತಿಗಳನ್ನು ಆನ್‌ಲೈನ್ ನಲ್ಲಿ ಪ್ರಾರಂಭಿಸುವಂತೆ ಸೂಚನೆ ನೀಡಲಾಗಿದೆ ಎಂದು ಬೆಂಗಳೂರು ವಿವಿ ಉಪ ಕುಲಪತಿ ಕೆ.ವೇಣುಗೋಪಾಲ್ ಅವರು ಮಾಹಿತಿಯನ್ನು ನೀಡಿದ್ದಾರೆ.

ಈ ಮುಂಚೆ ಮೊದಲನೇ ಸೆಮಿಸ್ಟರ್ ಗೆ ಆನ್‌ಲೈನ್ ತರಗತಿ ಆರಂಭಿಸಲು ವಿವಿ ಸೂಚನೆ ನೀಡಿತ್ತು. ಇದೀಗ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೂ ಮೇ 5,2021ರಿಂದ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ.
For Quick Alerts
For Daily Alerts
English summary
Bangalore university going to conduct online classes for ug and pg students due covid amid.


Click it and Unblock the Notifications











