BCWD NEET/JEE Pre Examination Training: ನೀಟ್ ಮತ್ತು ಜೆಇಇ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡುವ ನೀಟ್ ಹಾಗೂ ಜೆಇಇ (ಮೈನ್ಸ್ ಮತ್ತು ಅಡ್ವಾನ್ಸ್ಡ್) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನೀಟ್ ಮತ್ತು ಜೆಇಇ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ/10+1 ವ್ಯಾಸಂಗ ಮಾಡುತ್ತಿರುವ (ವಿಜ್ಞಾನ ವಿಭಾಗದಲ್ಲಿ) ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್ ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://bcwd.karnataka.gov.in/ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 23,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಸದರಿ ಪರೀಕ್ಷಾ ಪೂರ್ವ ತರಬೇತಿಗಳಿಗೆ ಸಂಬಂಧಪಟ್ಟಂತೆ ನೀಟ್ ಪರೀಕ್ಷಾ ಪೂರ್ವ ತರಬೇತಿಯನ್ನು ಬೆಂಗಳೂರು ನಗರದ ಮಲ್ಲೇಶ್ವರಂ ಹಾಗೂ ಯಲಹಂಕ ಮತ್ತು ಜೆಇಇ ಪರೀಕ್ಷಾ ಪೂರ್ವ ತರಬೇತಿಯನ್ನು ಬೆಂಗಳೂರು ನಗರ ಜಿಲ್ಲೆಯ ವಿಜಯನಗರ ಇಲ್ಲಿ ನೀಡಲಿದ್ದು, ಅಭ್ಯರ್ಥಿಗಳು ತರಬೇತಿಗೆ ನಿಯಮಿತವಾಗಿ ಹಾಜರಾಗಬೇಕು. ಸರ್ಕಾರ ಕಾಲಕಾಲಕ್ಕೆ ನೀಡುವ ನಿರ್ದೇಶನದಂತೆ ಸದರಿ ಕೋಚಿಂಗ್ ಅನ್ನು ಕ್ಲಾಸ್ ರೂಂ (ಆಫ್‌ಲೈನ್) ಅಥವಾ ಆನ್‌ಲೈನ್ ಮೂಲಕ ನೀಡಲಾಗುವುದು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಾಮಾನ್ಯ ಅರ್ಹತೆ ಮತ್ತು ಸೂಚನೆಗಳು:

* ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಯಿಸಲಾಗಿರಬೇಕು.

* ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಯ ಜಾತಿಗೆ ಸೇರಿರಬೇಕು.

* ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ರೂ.6.00 ಲಕ್ಷಗಳು

* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸದರಿ ಪರೀಕ್ಷಾ ಪೂರ್ವ ತರಬೇತಿಗಳನ್ನು ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ/10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. ಎಸ್‌ಎಸ್‌ಎಲ್‌ಸಿ ಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು.

* ಸದರಿ ಪರೀಕ್ಷಾ ಪೂರ್ವ ತರಬೇತಿಯನ್ನು ಖಾಸಗಿ ಸಂಸ್ಥೆಗಳ ಮೂಲಕ ನೀಡಲಾಗುವುದು. ತರಬೇತಿಯು ಉಚಿತವಾಗಿದ್ದು, ತರಬೇತಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತರಬೇತಿ ಭತ್ಯೆ, ಪ್ರಯಾಣ ಭತ್ಯೆ ಹಾಗೂ ಇತರೆ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ.

* ತರಬೇತಿಯು ಉಚಿತವಾಗಿದ್ದು ವಿದ್ಯಾರ್ಥಿಗಳ ಶುಲ್ಕವನ್ನು ಹಿಂದುಳಿದ ವರ್ಗಗಳ ಇಲಾಖೆಯಿಂದ ಪಾವತಿಸಲಾಗುವುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಬೇಕು. ಬೇರೆ ಯಾವುದೇ ಪ್ರಕಾರಗಳಲ್ಲೂ ಸಲ್ಲಿಸುವ ವಿದ್ಯಾರ್ಥಿಯ ಅರ್ಜಿಯನ್ನಾಗಲಿ ಅಥವಾ ಮನವಿಯನ್ನಾಗಲಿ ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Backward classes welfare department 2021-22 invited applications for pre-examination training for jee and neet (advanced and mains).
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+