BCWD 2022-23 : ಸೇನಾ ಆಯ್ಕೆ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಸೇನಾ ಆಯ್ಕೆ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 30,022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 
ಸೇನಾ ಆಯ್ಕೆ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಉಚಿತವಾಗಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು, ತರಬೇತಿಯ ವಿವರ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಓದಿ ತಿಳಿಯಿರಿ.

ವಿದ್ಯಾರ್ಹತೆ :

ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು.

ಅರ್ಹತೆಗಳು ಹಾಗೂ ತರಬೇತಿಯ ನಿಬಂಧನೆಗಳು :

* ಕೇಂದ್ರ/ರಾಜ್ಯ ಸರ್ಕಾರದ/ಅನುದಾನಿತ ಸಂಸ್ಥೆಗಳ/ಸಾರ್ವಜನಿಕ ಸ್ವಾಮ್ಯತೆಗೆ ಒಳಪಟ್ಟ ಸಂಸ್ಥೆಗಳಲ್ಲಿನ ನೌಕರರು ಸದರಿ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಮತ್ತು ತರಬೇತಿ ಪಡೆಯಲು ಅರ್ಹರಿರುವುದಿಲ್ಲ.

* ಇಲಾಖೆಯಿಂದ ನೀಡುವ ಸದರಿ ತರಬೇತಿಯನ್ನು ಅಭ್ಯರ್ಥಿಗಳು ಒಂದು ಬಾರಿ ಮಾತ್ರ ಪಡೆಯಲು ಅರ್ಹರು.

* ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಅಥವಾ 3(ಬಿ) ಗೆ ಸೇರಿರಬೇಕು.

ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ :

ಪ್ರವರ್ಗ-1- 2.50ಲಕ್ಷ
ಪ್ರವರ್ಗ-2(ಎ), 3(ಎ) ಮತ್ತು 3(ಬಿ) - 1.00ಲಕ್ಷ

ತರಬೇತಿಯ ವಿವರ :

* ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು.

 

* ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಅಭ್ಯರ್ಥಿಗಳಿಗೆ ಈ ಅವಧಿಯಲ್ಲಿ ಉಚಿತ ವಸತಿ ಮತ್ತು ಊಟದ ಸೌಲಭ್ಯವವನ್ನು ನೀಡಲಾಗುವುದು.

* ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 4 ತಿಂಗಳುಗಳ ತರಬೇತಿ ಅವಧಿಯಲ್ಲಿ ದೈಹಿಕ ಸಹಿಷ್ಣುತೆ ಹಾಗೂ ಲಿಖಿತ ಪರೀಕ್ಷೆಗೆ ಸಂಬಂಧಪಟ್ಟಂತೆ ತರಬೇತಿ ನೀಡಲಾಗುವುದು.

* ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಒಂದು ಜೊತೆ ಟ್ರ್ಯಾಕ್ ಸೂಟ್, ದೈಹಿಕ ತರಬೇತಿಗೆ ಅಗತ್ಯವಾದ ಒಂದು ಜೊತೆ ಸಮವಸ್ತ್ರ ಹಾಗೂ ಒಂದು ಜೊತೆ ಶೂಗಳನ್ನು ಉಚಿತವಾಗಿ ವಿತರಿಸಲಾಗುವುದು.

* ತರಬೇತಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಉಪಕರಣಗಳನ್ನು ಅಳವಡಿಸಿಕೊಂಡು ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳ ಹಾಜರಾತಿಯನ್ನು ನಿರ್ವಹಿಸಲಾಗುವುದು.

* ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಶೇ.80ರಷ್ಟು ಹಾಜರಾತಿಯು ಕಡ್ಡಾಯವಾಗಿರುತ್ತದೆ.

* ತರಬೇತಿ ಪೂರ್ಣಗೊಳಿಸುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

* ಸದರಿ ತರಬೇತಿಯನ್ನು ಪಡೆದು ವಿವಿಧ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಅದರ ಮಾಹಿತಿಯನ್ನು ತರಬೇತಿ ಪಡೆಯುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು.

ಸೇನಾ ಆಯ್ಕೆ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ :

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್ https://bcwd.karnataka.gov.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಪ್ರಕಟಿಸಿಸಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಜುಲೈ 30,2022ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ನಿಗದಿತ ನಮೂನೆಯಲ್ಲಿ ಇಲ್ಲದ ಅರ್ಜಿಯನ್ನು ಹಾಗೂ ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
BCWD invited applications for army pre-selection training. Interested candidates can apply before July 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X