BCWD Dolu And Nadaswara Music Training : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಡೋಲು ಮತ್ತು ನಾದಸ್ವರ ಸಂಗೀತ ತರಬೇತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು.

 

2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ನೀಡಲಾಗುವುದು.

ಡೋಲು ಮತ್ತು ನಾದಸ್ವರ ಸಂಗೀತ ತರಬೇತಿಗಾಗಿ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಅರ್ಹತೆಗಳು :

*ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿ ಬರುವ ಸವಿತಾ ಸಮಾಜ ಅಥವಾ ಅದರ ಉಪಜಾತಿಗಳಿಗೆ ಸೇರಿರಬೇಕು.
* ವಯೋಮಿತಿ ಕನಿಷ್ಟ 10 ವರ್ಷ ಹಾಗೂ ಗರಿಷ್ಟ 15 ವರ್ಷಗಳು (ಒಂದುವೇಳೆ ಅಧ್ಯಯನ ಮಾಡುತ್ತಿರುವ 15 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳು ದೊರೆಯದ ಪಕ್ಷದಲ್ಲಿ ಮಾತ್ರ ೧೮ ವರ್ಷದವರೆಗಿನ ಮಕ್ಕಳನ್ನು ಸ್ವಲ್ಪಮಟ್ಟಿಗೆ ಸೇರಿಸಲು ಅವಕಾಶ ನೀಡಲಾಗುವುದು.)

 

ವಿದ್ಯಾರ್ಥಿಗಳಿಗೆ ಒದಗಿಸಲಾಗುವ ಸೌಲಭ್ಯಗಳ ವಿವರ :

* ಉಚಿತ ಊಟ ಮತ್ತು ವಸತಿ ವ್ಯವಸ್ಥೆ/ವಸತಿಯೇತರ ವಿದ್ಯಾರ್ಥಿಗಳಿಗೆ ಅವಕಾಶ.
* ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ನ ಸ್ಥಳೀಯ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ.
* ಮೆಟ್ರಿಕ್ ಪೂರ್ವ ವಸತಿ ನಿಲಯಗಳಲ್ಲಿ ಒದಗಿಸಲಾಗುವಂತೆ ಸಮವಸ್ತ್ರ, ಪಠ್ಯಪುಸ್ತಕ, ಲೇಖನ, ಸಾಮಾಗ್ರಿ, ಜಮಖಾನ/ಹಾಸಿಗೆ, ಹೊದಿಕೆ, ಕ್ಷೌರದ ವೆಚ್ಚ ಇತ್ಯಾದಿಗಳನ್ನು ಒದಗಿಸಲಾಗುವುದು.

* ವಿದ್ಯಾರ್ಥಿಗೆ ಮಾಸಿಕ ತರಬೇತಿ ಭತ್ಯೆ 500/-ರೂ ರಂತೆ ನೀಡಲಾಗುವುದು.
* ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರು ಇದರ ಮೂಲಕ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ತರಬೇತಿಯನ್ನು ನೀಡಲಾಗುವುದು (2022-23ನೇ ಸಾಲಿಗೆ ಖಾಲಿ ಇರುವ 14 ಡೋಲು ತರಬೇತಿಯ ಸ್ಥಾನಗಳು ಮತ್ತು 10 ನಾದಸ್ವರ ತರಬೇತಿಯ ಸ್ಥಾನಗಳನ್ನು ತುಂಬಲಾಗುವುದು.

ಡೋಲು ಮತ್ತು ನಾದಸ್ವರ ಸಂಗೀತ ತರಬೇತಿಗಾಗಿ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ವಿಧಾನ :

ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಮೇ 31,2022ರೊಳಗೆ ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಲು ತಿಳಿಸಿದೆ.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು :

* ಜನನ ಪ್ರಮಾಣ ಪತ್ರ/ವರ್ಗಾವಣೆ ಪ್ರಮಾಣ ಪತ್ರ
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಆಧಾರ್ ಪ್ರತಿ
* ವಿದ್ಯಾರ್ಥಿಯು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಓದಿರುವ ಶಾಲೆ ಹಾಗೂ ಉತ್ತೀರ್ಣವಾಗಿರುವ ತರಗತಿಯ ಬಗ್ಗೆ ಅದೇ ಶಾಲೆಯ ಮುಖ್ಯೋಪಾಧ್ಯಾಯರಿಂದ ದೃಢೀಕರಣ ಪ್ರತಿ.

ಸಹಾಯಕ ವಾಣಿ : 8050770004
ಅಧಿಕೃತ ವೆಬ್‌ಸೈಟ್ : https://bcwd.karnataka.gov.in/

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BCWD invited applications for dolu and nadaswara music training 2022-23. Apply before May 31
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X