Backward Class Welfare Department 2021-22 : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಡಿ.31ರೊಳಗೆ ಅರ್ಜಿ ಹಾಕಿ

2021-22ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು "ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ" ಕಾರ್ಯಕ್ರಮಗಳಡಿ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುವ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆಯ ಅವಧಿ ಮತ್ತೊಮ್ಮೆ ವಿಸ್ತರಣೆ

ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಆನ್‌ಲೈನ್ ಮೂಲಕ ಅಕ್ಟೋಬರ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ನಿಗದಿ ಮಾಡಲಾಗಿತ್ತು. ಆದರೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದರು ಹಾಗಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನವೆಂಬರ್ 30,2021ರ ವರೆಗೆ ವಿಸ್ತರಿಸಲಾಗಿತ್ತು. ಇದೀಗ ಮತ್ತೊಮ್ಮೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿತ್ತು, ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಹಾಕಲು ಅವಕಾಶ ನೀಡಲಾಗಿದೆ.

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005/8050770004

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅಧಿಕೃತ ವೆಬ್‌ಸೈಟ್: https://ssp.postmatric.karnataka.gov.in/

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್: http://backwardclasses.kar.nic.in/

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಿಕೆಯ ಅವಧಿ ವಿಸ್ತರಣೆಯ ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BCWD invited applications for post matric scholarship, fee concession, vidyasiri-food and Accomadation and scholarship for nursing students.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X