2021-22ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು "ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ" ಕಾರ್ಯಕ್ರಮಗಳಡಿ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಗದೊಮ್ಮೆ ವಿಸ್ತರಿಸಲಾಗಿದೆ.

ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಆನ್‌ಲೈನ್ ಮೂಲಕ ಫೆಬ್ರವರಿ 28,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಆದರೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಈ ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮತ್ತೊಮ್ಮೆ ಮಾರ್ಚ್ 31,2022ರ ವರೆಗೆ ವಿಸ್ತರಿಸಲಾಗಿದೆ.
ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005/8050770004
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅಧಿಕೃತ ವೆಬ್‌ಸೈಟ್: https://ssp.postmatric.karnataka.gov.in/
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್: http://backwardclasses.kar.nic.in/
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಿಕೆಯ ಅವಧಿ ವಿಸ್ತರಣೆಯ ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











