2021-22ನೇ ಸಾಲಿನ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇಲಾಖೆಯು ಈ ಬಗೆಗೆ ಡಿಸೆಂಬರ್ 8,2021ರಂದು ಪ್ರಕಟಣೆಯನ್ನು ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಡಿಸೆಂಬರ್ 30,2021ರ ಸಂಜೆ 5:30ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2021-22ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ದ ವಿಶ್ವ ವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಪ್ರಸಕ್ತ ಸಾಲಿನಲ್ಲಿ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ/ಫೆಲೋಶಿಪ್ ನೀಡಲಾಗುವುದು.
ಮಾನವಿಕ ವಿಷಯಗಳು, ಭಾಷೆ, ಸಮಾಜ ವಿಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೃಷಿ ಮತ್ತು ಸಂಬಂಧಿತ ವಿಜ್ಞಾನಗಳು, ವಾಣಿಜ್ಯ ಮತ್ತು ನಿರ್ವಹಣೆ, ತಾಂತ್ರಿಕ ಹಾಗೂ ವೈದ್ಯಕೀಯ ವಿಜ್ಞಾನಗಳಲ್ಲಿ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.10,000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ಪ್ರವರ್ಗವಾರು ಮೀಸಲಾತಿ ಹಾಗೂ ಅನುದಾನ ಲಭ್ಯತೆಗೆ ಅನುಗುಣವಾಗಿ ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಗುವುದು.
ಅರ್ಹತೆಗಳು:
* ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
* ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
* ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪೂರ್ಣಾವಧಿ (Full Time) ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರಬೇಕು.
* ಸೌಲಭ್ಯವನ್ನು ಪಡೆಯಲಿಚ್ಛಿಸುವ ವಿದ್ಯಾರ್ಥಿಯು ಭಾರತ ಸರ್ಕಾರ /ಕರ್ನಾಟಕ ಸರ್ಕಾರ/ವಿಶ್ವವಿದ್ಯಾಲಯ ಅಥವಾ ಇತರೆ ಯಾವುದೇ ಸಂಸ್ಥೆಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗೆ ಆಯ್ಕೆಯಾಗಿರಬಾರದು.
ಶೈಕ್ಷಣಿಕ ಅರ್ಹತೆಗಳು:
• ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು.
• ವಿಶ್ವವಿದ್ಯಾಲಯ/ಅಧಿಕೃತ ಸಂಸ್ಥೆಗಳಲ್ಲಿ ಸಂಶೋಧನಾ ಮಾರ್ಗದರ್ಶಕರಡಿಯಲ್ಲಿ ಪಿಎಚ್.ಡಿ ಅಧ್ಯಯನಕ್ಕಾಗಿ ನೋಂದಣಿ ಮಾಡಿಕೊಂಡಿರಬೇಕು.
ವಯೋಮಿತಿ:
• ಅಭ್ಯರ್ಥಿಯ ಗರಿಷ್ಠ ವಯೋಮಿತಿ 35 ವರ್ಷಗಳು.
ವಿದ್ಯಾರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯಮಿತಿ:
ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರಾತಿಗಾಗಿ ನಿಗದಿಪಡಿಸಿರುವ ವಾರ್ಷಿಕ ಆದಾಯಮಿತಿ
• ಪ್ರವರ್ಗ-1 - ರೂ.4.50 ಲಕ್ಷ.
• ಪ್ರವರ್ಗ-2(ಎ), 3(ಎ), 3(ಬಿ) ಮತ್ತು Other OBC - ರೂ.3.50 ಲಕ್ಷ.
ಕೇಂದ್ರ / ರಾಜ್ಯ ಸರ್ಕಾರಿ / ಅನುದಾನಿತ ಸಂಸ್ಥೆ / ಸಾರ್ವಜನಿಕ ಸ್ವಾಮ್ಯತೆಗೆ ಒಳಪಟ್ಟ ಸಂಸ್ಥೆಗಳ ಉದ್ಯೋಗಿಗಳು ಈ ಸೌಲಭ್ಯವನ್ನು ಪಡೆಯಲು ಅರ್ಹರಲ್ಲ.
ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಪಿಎಚ್.ಡಿ ಅಧ್ಯಯನಕ್ಕಾಗಿ ಈ ಸೌಲಭ್ಯವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 30,2021
ಅಧಿಕೃತ ವೆಬ್‌ಸೈಟ್: https://bcwd.karnataka.gov.in/
ಸಹಾಯವಾಣಿ ಸಂಖ್ಯೆ: 8050770004
ಅಭ್ಯರ್ಥಿಗಳು ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ