ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಆಫೀಸರ್, ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಬಿಇಎಲ್ ಒಟ್ಟು 549 ಹುದ್ದೆಗಳ ನೇಮಕಾತಿಗಾಗಿ ನವೆಂಬರ್ 25,2020ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಸಂದರ್ಶನ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಬಿಇಎಲ್ ಸಂದರ್ಶನ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಬಿಇಎಲ್ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ.
ಸ್ಡೆಪ್ 2: ಅಲ್ಲಿ ನೀಡಲಾಗಿರುವ ಸಂದರ್ಶನ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ಅರ್ಜಿ ಸಂಖ್ಯೆ, ಜನ್ಮ ದಿನಾಂಕ ಮತ್ತು ಇ-ಮೇಲ್ ವಿಳಾಸ ನೀಡಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











