ಬೆಂಗಳೂರು ನಗರ ವಿಶ್ವವಿದ್ಯಾಲಯ ಸಂಯೋಜಿತ ಹಾಗೂ ಸ್ವಾಯತ್ತತೆ ಕಾಲೇಜುಗಳಿಗೆ 2020-21 ಸಾಲಿಗೆ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.

ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳನ್ನು ಮತ್ತು ಶಾಲೆಗಳನ್ನು ತೆರೆಯಬಾರದೆಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೂಚನೆ ನೀಡಿದೆ. ಆದರೂ ಕೆಲವು ಪ್ರತಿಷ್ಠಿತ ಕಾಲೇಜುಗಳು ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತಿರುವ ಕುರಿತು ಮತ್ತು ಮೊದಲನೇ ವರ್ಷದ ತರಗತಿಗಳನ್ನು ಆರಂಭಿಸುತ್ತಿರುವ ಕುರಿತು ಈಗಾಗಲೇ ದೂರುಗಳು ಬಂದಿದ್ದವು.
ಈ ಸಂದರ್ಭದಲ್ಲಿ ಶಾಲೆ ಮತ್ತು ಕಾಲೇಜುಗಳನ್ನು ನಡೆಸುವುದಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿದಂತಾಗುವುದು ಹಾಗಾಗಿ ಬೆಂಗಳೂರು ನಗರ ವಿಶ್ವವಿದ್ಯಾಲಯವು ತನ್ನ ಸಂಯೋಜಿತ ಕಾಲೇಜುಗಳಿಗೆ 2020-21ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಹೊರಡಿಸುವವರೆಗೂ ಪ್ರವೇಶ ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದೆ.


Click it and Unblock the Notifications











