ಬೆಂಗಳೂರು ವಿಶ್ವವಿದ್ಯಾಲಯ 2019ರ ಪರೀಕ್ಷಾ ಫಲಿತಾಂಶ ಅತಿ ಶೀಘ್ರದಲ್ಲಿ ಬಿಡುಗಡೆಯಾಗುವ ಸಾಧ್ಯತೆ

2019ರ ಮೇ ಮತ್ತು ಜೂನ್ ನಲ್ಲಿ ಬೆಂಗಳೂರು ವಿವಿ ನಡೆಸಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿಯ ಫಲಿತಾಂಶವನ್ನು ವಿಶ್ವವಿದ್ಯಾಲಯವು ಅತಿ ಶೀಘ್ರದಲ್ಲಿ ಪ್ರಕಟಿಸಲಿದೆ. ಅಭ್ಯರ್ಥಿಗಳು ಆನ್-ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ತಮ್ಮ ರಿಜಿಸ್ಟರ್ ನಂಬರ್ ನಮೂದಿಸಿ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

ಬೆಂಗಳೂರು ವಿವಿ ಪರೀಕ್ಷಾ ಫಲಿತಾಂಶ ಅತಿ ಶೀಘ್ರದಲ್ಲಿ ಪ್ರಕಟ

ಫಲಿತಾಂಶಗಳಲ್ಲಿ ಗೊಂದಲವಿದ್ದರೆ ಮರುಮೌಲ್ಯಮಾಪನ ಮತ್ತು ಉತ್ತರ ಪತ್ರಿಕೆ ನಕಲು ಪ್ರತಿ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಶುಲ್ಕ ಭರಿಸಿ ಪಡೆಯಬಹುದಾಗಿದೆ.

ಪರೀಕ್ಷಾ ಫಲಿತಾಂಶವು ಇದೇ ಜುಲೈ 26ರಂದು ಅಂದರೆ ಶುಕ್ರವಾರದಂದು ಪ್ರಕಟವಾಗುವ ಸಾಧ್ಯತೆ ಇದ್ದು, ಅಭ್ಯರ್ಥಿಗಳು ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಬಹುದು.

ಪರೀಕ್ಷಾ ಫಲಿತಾಂಶ ಚೆಕ್ ಮಾಡುವುದು ಹೇಗೆ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಬೆಂಗಳೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ http://bangaloreuniversity.ac.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ ನಲ್ಲಿ ಇರುವ "Results 2019 Download" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ನಿಮ್ಮ ರಿಜಿಸ್ಟರ್ ನಂಬರ್ / ರೋಲ್ ನಂಬರ್ ಅನ್ನು ನಮೂದಿಸಿ.
ಸ್ಟೆಪ್ 4: ನಿಮ್ಮ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಅಭ್ಯರ್ಥಿಗಳೂ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
Bengaluru university UG / PG 2019 results will be declare soon in official website, how to download.check here
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X