Bhagavad Gita In Schools : ಶಾಲಾ ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಕೆ ಕುರಿತು ಚರ್ಚೆಯ ನಂತರ ನಿರ್ಧಾರ : ಸಿಎಂ

ಶಾಲಾ ಶಿಕ್ಷಣ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಪರಿಚಯಿಸುವ ಕುರಿತು ಚರ್ಚೆಯನ್ನು ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 
ಶಾಲಾ ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಸುವ ಕುರಿತು ಚರ್ಚಿಸಿ ನಂತರ ನಿರ್ಧಾರ : ಬೊಮ್ಮಾಯಿ

2022-23ನೇ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12 ನೇ ತರಗತಿಗಳಿಗೆ ಭಗವದ್ಗೀತೆಯು ಶಾಲಾ ಪಠ್ಯಕ್ರಮದ ಭಾಗವಾಗಲಿದೆ ಎಂದು ಬಿಜೆಪಿ ಆಡಳಿತವಿರುವ ಗುಜರಾತ್ ಗುರುವಾರ ಘೋಷಿಸಿತ್ತು.

ಶಾಲಾ ಶಿಕ್ಷಣದಲ್ಲಿ ಭಗವದ್ಗೀತೆಯನ್ನು ಪರಿಚಯಿಸುವ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದಾಗ "ಗುಜರಾತ್‌ನಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ನಮ್ಮ ರಾಜ್ಯದ ಸಚಿವರು ಈ ಕುರಿತು ಚರ್ಚಿಸುವುದಾಗಿ ಹೇಳಿದ್ದಾರೆ. ಶಿಕ್ಷಣ ಇಲಾಖೆ ಯಾವ ವಿವರಗಳನ್ನು ಹೊರತರುತ್ತದೆ ಎಂಬುದನ್ನು ನೋಡೋಣ" ಎಂದು ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣ ಮತ್ತು ನೈತಿಕ ಮೌಲ್ಯಗಳನ್ನು ನೀಡುವುದು ಪ್ರಮುಖ ಉದ್ದೇಶವಾಗಿದ್ದು, ಚರ್ಚೆಯ ನಂತರವೇ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯ ಎಂದಿದ್ದಾರೆ.

ಭಗವದ್ಗೀತೆ ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ತರುತ್ತದೆಯೇ ಎಂದು ಪ್ರಶ್ನಿಸಿದಾಗ ಮುಖ್ಯಮಂತ್ರಿ ಬೊಮ್ಮಾಯಿ 'ಇನ್ನೇನು?...ನೀವೇ ಹೇಳಿ ಭಗವದ್ಗೀತೆ ಇಲ್ಲದಿದ್ದರೆ ಮತ್ಯಾವುದು ನೈತಿಕ ಮೌಲ್ಯಗಳನ್ನು ನೀಡುತ್ತದೆ' ಎಂದು ಪ್ರಶ್ನಿಸಿದರು. ಗುಜರಾತ್‌ನ ನಿರ್ಧಾರದ ನಂತರ, ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ನೈತಿಕ ವಿಜ್ಞಾನ ಶಿಕ್ಷಣದ ಭಾಗವಾಗಿ ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳುವ ಮೊದಲು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದು ಶುಕ್ರವಾರ ಹೇಳಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
C M Bommai told decision of adding bhagavad gita in school syllabus will announced after discussion.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X