ನಾಳೆ ದೇಶದಾದ್ಯಂತ ಭಾರತ್ ಬಂದ್!..
ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಜನವರಿ 8,2020 ಬುಧವಾರದಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಈ ಮುಂಚೆ 'ಭಾರತ್ ಬಂದ್' ಎಂದು ಹೇಳಲಾಗಿತ್ತು ಆದರೆ ನಾಳೆ ಮುಷ್ಕರ ಮಾತ್ರ ನಡೆಯಲಿದೆ ಎಂದು ಸಂಘಟನೆಗಳು ಸ್ಪಷ್ಟಪಡಿಸಿವೆ.
ನಾಳೆ ಆಟೊ, ಟ್ಯಾಕ್ಸಿ, ಸರಕು ಸಾಗಣೆ, ಬ್ಯಾಂಕಿಂಗ್ ಸೇವೆಯಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ. ಇನ್ನೂ ಶಾಲಾ ಮತ್ತು ಕಾಲೇಜುಗಳಿಗೆ ರಜೆಯೇ ಎನ್ನುವ ಪ್ರಶ್ನೆಗೆ ಉತ್ತರ ಕೂಡ ಸಿಕ್ಕಿದೆ. ನಾಳೆ ಮುಷ್ಕರ ನಡೆಯುತ್ತಿರುವುದರಿಂದಾಗಿ ಶಾಲೆ, ಕಾಲೇಜು ಮತ್ತು ಸರಕಾರಿ ಕಚೇರಿಗಳು ಕೂಡಾ ಎಂದಿನಂತೆಯೇ ಕಾರ್ಯ ನಿರ್ವಹಿಸುತ್ತವೆ.
ಈ ಮುಷ್ಕರ ನಡೆಯುತ್ತಿರುವುದೇಕೆ?:
ದುಡಿಯುವ ಜನರ ಹಕ್ಕುಗಳನ್ನು ಸಂರಕ್ಷಿಸಲು ಪರ್ಯಾಯ ಆರ್ಥಿಕ ನೀತಿಗಳನ್ನು ಜಾರಿಗೆ ತರಬೇಕು ಮತ್ತು ಕಾರ್ಮಿಕರಿಗೆ ಕನಿಷ್ಠ 21 ಸಾವಿರ ರೂ. ವೇತನವವನ್ನು ನಿಗದಿ ಮಾಡುವ ವಿಷಯ ಸೇರಿದಂತೆ ಒಟ್ಟು 13 ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳು ಮುಂದಿಟ್ಟಿವೆ. ಆದರೆ, ಬಂದ್‌ಗೆ ಕರೆ ಕೊಟ್ಟಿಲ್ಲ. ಎಲ್ಲೆಡೆ ಪ್ರತಿಭಟನೆಗಳನ್ನಷ್ಟೇ ಮಾಡಲಾಗುತ್ತಿದೆ.