ಬಿಹೆಚ್‌ಇಎಲ್‌ ನೇಮಕಾತಿ 2019: ಇಂಜಿನಿಯರ್ ಮತ್ತು ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ

ಬಿಹೆಚ್‌ಇಎಲ್‌ ಇಂಜಿನಿಯರ್ ಮತ್ತು ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ. ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಇಂಜಿನಿಯರ್ ಮತ್ತು ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಖಾಲಿ ಇರುವ ಒಟ್ಟು 145 ಇಂಜಿನಿಯರ್ ಮತ್ತು ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಮೇ 6 ,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

 ಬಿಹೆಚ್‌ಇಎಲ್‌  ನೇಮಕಾತಿ: ಇಂಜಿನಿಯರ್ ಮತ್ತು ಎಕ್ಸಿಕ್ಯುಟಿವ್ ಟ್ರೈನಿ  ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೇ ಮೇ 25 ಮತ್ತು 26 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಪ್ರವೇಶ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಬಿಹೆಚ್‌ಇಎಲ್‌ ಇಂಜಿನಿಯರ್ ಮತ್ತು ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಬಿಹೆಚ್‌ಇಎಲ್‌ನ ಅಧಿಕೃತ ವೆಬ್ ಸೈಟ್ https://careers.bhel.in/bhel/jsp/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "Current Openings" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Recruitment-Engineer Trainee & Executive Trainee 2019" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಅಭ್ಯರ್ಥಿಗಳು ಪುಟ ಕೆಳಭಾಗದಲ್ಲಿರುವ "Download Admit Card" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ಯೂಸರ್ ಐಡಿ ಮತ್ತು ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಿ ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣುತ್ತದೆ
ಸ್ಟೆಪ್ 6: ಅಭ್ಯರ್ಥಿಗಳು ಸ್ಕ್ರೀನ್ ಮೇಲೆ ಕಾಣುವ ಪ್ರವೇಶ ಪತ್ರವನ್ನು ಡೌನಲೋಡ್ ಮಾಡಿಕೊಂಡು ಒಂದು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BHEL has released the admit cards 2019 for engineer and executive posts on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+